ಪದವಿ ಪಡೆದು ದೇಶದ ಅಭಿವೃದ್ಧಿಗೆ ಶ್ರಮಿಸಿ

h26-jabin college
Published on

ಹುಬ್ಬಳ್ಳಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಪಿ.ಸಿ. ಜಾಬಿನ್ ಕಾಲೇಜ್‌ನಲ್ಲಿ ಉಚಿತ ಸಿಇಟಿ-ನೀಟ್ ತರಗತಿಯನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.
ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಡಾ. ವೀರೇಶ ಬಾಳಿಕಾಯಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಕನಸು ನನಸು ಮಾಡಲು ಇಂಥ ತರಗತಿಗಳಿಂದ ಪ್ರಯೋಜನ. ವೈದ್ಯಕೀಯ, ಇಂಜಿನಿಯರಿಂಗ್ ಸೇರಿ ವಿವಿಧ ಪದವಿ ಪಡೆದು ದೇಶದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಲಹೆ ನೀಡಿದರು.
ಪ್ರಾಚಾರ್ಯರಾದ ಡಾ.ಎಲ್.ಡಿ. ಹೊರಕೇರಿ, ವಿಠ್ಠಲ ವಾಗ್ಮೋಡೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಣಿಕಂಠ ಕಳಸ, ರಮೇಶ ಲೋಂಡೆ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net