

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಜೂನ್ ೩ರಂದು ನಡೆಯಲಿರುವ ಚುನಾವಣೆಯಲ್ಲಿ ಪದವೀಧರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಹೇಳಿದರು.
ನಗರದ ಡಾ.ಎಸ್.ಎಂ.ಪAಡಿತ ರಂಗಮAದಿರದಲ್ಲಿ ಭಾರತದ ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸ್ವೀಪ್ ಸಮಿತಿಯಿಂದ ಬುಧವಾರ ಏರ್ಪಡಿಸಿದ್ದ ಈಶಾನ್ಯ ಪದವೀಧರ ಮತದಾರರಿಗೆ ಮತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾನ ಕೇಂದ್ರದಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದು, ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸಬೇಕು ಎಂದು ಹೇಳಿದರು.
ಈಶಾನ್ಯ ಪದವೀಧರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿ¯್ಲÁಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ವೋಟಿಂಗ್ ಪ್ರಕ್ರಿಯೆ ಬ್ಯಾಲೆಟ್ ಪೇಪರ್ ಮೂಲಕ ನಡೆಯುತ್ತಿದ್ದು, ಮತ ತಿರಸ್ಕಾರ ಆಗದಂತೆ ನೋಡಿಕೊಳ್ಳಬೇಕು. ಮತದಾರ ಹೆಚ್ಚಾಗಿದ್ದು, ಎಲ್ಲರೂ ಸೂಚನೆಗಳನ್ನು ಅನುಸರಿಸಿ, ಸರಿಯಾಗಿ ಮತದಾನ ಮಾಡಬೇಕು ಎಂದರು.
ಮಹಾನಗರ ಪಾಲಿಕೆ ಆಯುಕ್ತ ಭುವನೇಶ ದೇವಿದಾಸ ಪಾಟೀಲ್ ಮಾತನಾಡಿದರು. ರಾಜ್ಯಮಟ್ಟದ ತರಬೇತಿದಾರ ಶಶಿಶೇಖರ ರೆಡ್ಡಿ ತರಬೇತಿ ನೀಡಿದರು. ಅರಣ್ಯ ವೃತ್ತದ ಉಪಸಂರP್ಷÀಣಾಧಿಕಾರಿ ಸುಮಿತಕುಮಾರ ಪಾಟೀಲ್, ಜಿಪಂ ಉಪ ಕಾರ್ಯದರ್ಶಿ ಅಬ್ದುಲ್ ಅಜೀಂ, ಪ್ರಮುಖರಾದ ಮಧುಮತಿ, ಡಿಡಿಪಿಯು ಶಿವಶರಣಪ್ಪ ಮುಳೆಗಾಂವ, ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ಇತರರಿದ್ದರು.