ಪದ್ಮಾವತಿ ದೇವಿಗೆ 108 ಸೀರೆ ಉಡಿ ಅರ್ಪಣೆ

NEW
Published on

ರಿಪ್ಪನ್‌ಪೇಟೆ: ಪೂರ್ವ ಪರಂಪರೆಯಂತೆ ಶ್ರೀಕ್ಷೇತ್ರ ಹೊಂಬುಜದಲ್ಲಿ ಮೂರನೇ ಸಂಪತ್ ಶುಕ್ರವಾರದ ಪೂಜೆ ಸಂಪ್ರದಾಯ ಬದ್ಧವಾಗಿ ನೆರವೇರಿತು. ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ಬಳಿಕ ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ವಿಶೇಷ ಪೂಜೆಗಳು ನೆರವೇರಿದವು.

ಶ್ರೀ ಪದ್ಮಾವತಿ ಅಮ್ಮನವರಿಗೆ 108 ಸೀರೆ ಉಡಿ ಅರ್ಪಣೆ ಮಾಡಲಾಯಿತು. ರಾಜ್ಯದ ವಿವಿಧೆಡೆಯಿಂದ ಹಾಗೂ ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶದಿಂದ ಆಗಮಿಸಿದ್ದ ಭಕ್ತರು ಶ್ರದ್ಧಾಭಕ್ತಿಯಿಂದ ಜಿನನಾಮ ಸ್ತುತಿಸಿ, ಭಕ್ತಿಕಾಣಿಕೆ ಸಮರ್ಪಿಸಿದರು. ಸಂಪ್ರದಾಯದಂತೆ ಉಡಿ ಅರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net