ಪಪಂ ಮುಖ್ಯಾಧಿಕಾರಿ ವರ್ಗಾವಣೆಗೆ ವಿರೋಧ

07Kush01
Published on

ಕುಶಾಲನಗರ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವರ್ಗಾವಣೆಯನ್ನು ಖಂಡಿಸಿ, ಕುಶಾಲನಗರ ಪ್ರಜ್ಞಾವಂತ ನಾಗರಿಕ ವೇದಿಕೆಯ ಸಂಚಾಲಕ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಪಪಂ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.


ಗುಂಡೂರಾವ್ ಬಡಾವಣೆ ನನ್ನದು ಎಂದು ಯಾರೋ ಒಬ್ಬ ಸುಳ್ಳು ದಾಖಲೆ ಸೃಷ್ಟಿಸಿ ಪಂಚಾಯಿತಿಗೆ ಬಂದವವನ್ನು ಬಾಯಿ ಮುಚ್ಚಿಸಿ ಕಳುಹಿಸಿದ ಕೀರ್ತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರಿಗೆ ಸಲ್ಲುತ್ತೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ವರ್ಗಾವಣೆ ಮಾಡುತ್ತಿರುವುದು ಸರಿಯಲ್ಲ ಎಂದರು.


ಪಪಂ ಸದಸ್ಯ, ನಗರ ಜೆಡಿಎಸ್ ಅಧ್ಯಕ್ಷ ವಿ.ಎಸ್.ಅನಂದಕುಮಾರ್ ಮಾತನಾಡಿ, ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಕೃಷ್ಣಪ್ರಸಾದ್ ಶ್ರಮಿಸುತ್ತಿದ್ದಾರೆ. ಸರ್ಕಾರದ ಹಲವು ಯೋಜನೆಗಳನ್ನು ತಂದು ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಅವರನ್ನು ಇಲ್ಲಿಯೇ ಕೆಲಸ ಮಾಡಲು ಬಿಡಬೇಕು. ಯಾವುದೇ ಒತ್ತಡಕ್ಕೂ ಮಣಿಯದೆ ಸರ್ಕಾರ ಇವರ ವರ್ಗಾವಣೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.


ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಪ್ರಜ್ಞಾವಂತ ನಾಗರಿಕ ವೇದಿಕೆ ಸದಸ್ಯರು ಪಟ್ಟಣ ಪಂಚಾಯಿತಿ ಕಚೇರಿವರೆಗೆ ತೆರಳಿದರು.


ಜಿಪಂ ಮಾಜಿ ಅಧ್ಯಕ್ಷ ಎಚ್.ಎಸ್.ಅಶೋಕ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಬಿ.ರಾಜು, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕಾಂಗ್ರೆಸ್ ಮುಖಂಡ ಮಂಜುನಾಥ್, ಗುಂಡೂರಾವ್, ಪಪಂ ಸದಸ್ಯ ಎಂ.ಕೆ.ದಿನೇಶ್, ಶಾಂತಪ್ಪ, ನವೀನ್, ಪ್ರಭು ಮಾದಪ್ಪ, ಆದಂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net