ಪಾರದರ್ಶಕ, ಜನಸ್ನೇಹಿ ಆಡಳಿತ ಇರಲಿ: ಆರ್.ವಿ. ದೇಶಪಾಂಡೆ

4 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಲ್ಯಾಣ ರಾಜ್ಯ ನಿರ್ಮಾಣ ಸರ್ಕಾರದ ಗುರಿ. ಸರಳ ಮತ್ತು ಜನಸ್ನೇಹಿ ಆಡಳಿತ ಇದ್ದಾಗ ಸರ್ಕಾರದ ಜನಕಲ್ಯಾಣ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಲು ಸಾಧ್ಯ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಕಾಲ ಕಾಯ್ದೆ ಅನುಷ್ಠಾನದಲ್ಲಿದ್ದರೂ ದಾಖಲಾತಿಗಳ ಅನಗತ್ಯ ಗೊಂದಲದಿAದ ಸರ್ಕಾರಿ ಸೇವೆ ವಿಳಂಬವಾಗುತ್ತಿವೆ. ಇದಕ್ಕೆ ಆಡಳಿತದ ವಿವಿಧ ಹಂತಗಳಲ್ಲಿ ಬದಲಾವಣೆ ಅಗತ್ಯ. ಕಂದಾಯ ಇಲಾಖೆಯ ತಹಸೀಲ್ದಾರ್ ಹುದ್ದೆಯ ಕಾರ್ಯಬಾರ ಅತಿಯಾಗಿದೆ. ದಿನನಿತ್ಯದ ಆಡಳಿತದ ಜೊತೆಗೆ ಪ್ರೊಟೋಕಾಲ್ ಡ್ಯೂಟಿ, ಇತರ ಕಾರ್ಯಭಾರಗಳು ಆಡಳಿತದ ಮೇಲೆ ಒತ್ತಡ ತರುತ್ತಿವೆ. ಕೆಲ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಯಾಗದಿರುವುದರಿಂದ ಸರ್ಕಾರಿ ಸೇವೆ ವಿಳಂಬವಾಗುತ್ತಿದೆ. ಹೆಚ್ಚುವರಿ ಹುದ್ದೆಗಳ ಸೃಷ್ಟಿ ಮಾಡುವ ಜೊತೆಗೆ ಕೆಲ ಇಲಾಖೆಗಳಲ್ಲಿ ಹೆಚ್ಚುವರಿ ಇರುವ ಹುದ್ದೆಗಳನ್ನು ರದ್ದುಪಡಿಸುವ ಬಗ್ಗೆಯೂ ಮಾಹಿತಿ ನೀಡಬೇಕು ಎಂದರು.
ಆಡಳಿತ ಸುಧಾರಣಾ ಆಯೋಗದ ಕಾರ್ಯದರ್ಶಿ ಎನ್.ಎಸ್. ಪ್ರಸನ್ನಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಽಕಾರಿ ದಿವ್ಯ ಪ್ರಭು ಸ್ವಾಗತಿಸಿದರು. ಹುಡಾ ಅಧ್ಯಕ್ಷ ಶಾಕೀರ ಸನದಿ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಆಯೋಗದ ವಿಶೇಷ ಕಾರ್ಯದರ್ಶಿ ರಮೇಶಕುಮಾರ ದೇಸಾಯಿ, ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ವೇದಿಕೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net