ಪರವಾನಗಿ ರಹಿತರ ತಂಬಾಕು ಮಾರಾಟಕ್ಕೆ ಅವಕಾಶ ನೀಡಿ: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯ

mysore
Published on

ಮೈಸೂರು: ಪರವಾನಗಿ ರಹಿತ ಬೆಳೆಗಾರರಿಗೆ ತಂಬಾಕು ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು. ಅವರ ಮೇಲೆ ವಿಧಿಸಲಾಗುತ್ತಿದ್ದ ದಂಡವನ್ನು ಮನ್ನಾ ಮಾಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಒತ್ತಾಯಿಸಿದರು.

ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದಕ್ಕೆ ಸೂಕ್ತವಾಗಿ ಸ್ಪಂದನೆ ವ್ಯಕ್ತಪಡಿಸಿದ ಸಚಿವ ಗೋಯಲ್, ಕಾರ್ಡ್ ಹೊಂದಿರದ(ಪರವಾನಗಿ ರಹಿತ) ತಂಬಾಕು ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸುವ ಕುರಿತು ಭರವಸೆ ನೀಡಿದ್ದಾರೆ.

ಜತೆಗೆ, ಪರವಾನಗಿ ತಂಬಾಕು ಬೆಳೆಗಾರರಿಗೆ ವಿಧಿಸುತ್ತಿದ್ದ ದಂಡವನ್ನು ಮನ್ನಾ ಮಾಡುವ ಸಂಬಂಧ ತಂಬಾಕು ಮಂಡಳಿಗೆ ಸೂಕ್ತ ನಿರ್ದೇಶನ ನೀಡಿವ ಭರವಸೆಯನ್ನೂ ನೀಡಿದ್ದು, ಶೀಘ್ರದಲ್ಲೇ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ ಎಂದು ಸಂಸದರು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net