ಪರಿಸರ ನೈರ್ಮಲ್ಯದಿಂದ ರೋಗ ತಡೆ

DR B.V.GIRISH
Published on

ಚಿತ್ರದುರ್ಗ: ಸ್ವಚ್ಛ ಕೈಗಳು ಹಾಗೂ ಶುದ್ಧ ಕುಡಿಯುವ ನೀರು, ಹಲವು ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತವೆ ಎಂದು ಟಿಎಚ್‌ಒ ಡಾ.ಬಿ.ವಿ.ಗಿರೀಶ್ ಹೇಳಿದರು.

ಜನಜಾಗೃತಿ ಸಪ್ತಾಹದ ಅಂಗವಾಗಿ ನಗರದ ಆಶ್ರಯ ಬಡಾವಣೆಯಲ್ಲಿ ಬುಧವಾರ ಏರ್ಪಡಿಸಿದ್ದ ಕಾರ‌್ಯಕ್ರಮದಲ್ಲಿ ಮಾತನಾಡಿ, ಪರಿಸರ ನೈರ್ಮಲ್ಯದಿಂದ ರೋಗಗಳನ್ನು ತಡೆಗಟ್ಟಬಹುದು. ಕಲುಷಿತ ನೀರಿನ ಸೇವನೆಯಿಂದ ಕರುಳು ಬೇನೆ, ಕಾಲರಾ ಮತ್ತಿತರ ಸಾಂಕ್ರಾಮಿಕ ಕಾಯಿಲೆಗಳಿಗೆ ತುತ್ತಾಗ ಬೇಕಾಗುತ್ತದೆಂದು ಎಚ್ಚರಿಸಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಆರೋಗ್ಯ ನಿರೀಕ್ಷಣಾಧಿಕಾರಿ ಗಂಗಾಧರ್ ರೆಡ್ಡಿ ಮಾತನಾಡಿದರು.
ಮಾರುತಿ ನಗರದ ವೈದ್ಯಾಧಿಕಾರಿ ಡಾ.ಯಶಸ್, ಆರೋಗ್ಯ ನಿರೀಕ್ಷಣಾಧಿಕಾರಿ ರಂಗಾರೆಡ್ಡಿ, ಶ್ರೀಧರ್, ಮಧುಸೂದನ್, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ತಿಪ್ಪಮ್ಮ, ಶಿಕ್ಷಕರಾದ ರುದ್ರಪ್ಪ, ನಿರ್ಮಲಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net