ಪರಿಣಾಮ ಬೋಧನೆಗೆ ರಂಗಭೂಮಿ ಕೌಶಲ ಸಹಕಾರಿ

CTD VISHVA RANGABUMI....
Published on

ಚಿತ್ರದುರ್ಗ: ರಂಗಭೂಮಿ ಕೌಶಲ ಬೋಧನೆಗೆ ನೆರವಾಗಲಿದೆ ಎಂದು ರಾಜ್ಯ ಶರಣ ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಕೆ.ಎಂ. ವೀರೇಶ್ ಅಭಿಪ್ರಾಯಪಟ್ಟರು.

ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರ ಣೆ ಅಂಗವಾಗಿ ನಗರದ ಬಾಪೂಜಿ ಸಮೂಹ ಸಂಸ್ಥೆ ಕಾಲೇಜು ಆವರಣದಲ್ಲಿ ಗುರುವಾರ ದ್ವಿತೀಯ ಬಿ.ಇಡಿ ಪ್ರಶಿಕ್ಷಣಾಥಿಗಳಿಗೆ ಏರ್ಪಡಿಸಿದ್ದ ‘ಶಿಕ್ಷಣದಲ್ಲಿ ರಂಗಕಲೆ’ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿವಿಧತೆಯಲ್ಲಿ ಏಕತೆ ಸಾಧಿಸುವ ಶಕ್ತಿ ರಂಗಭೂಮಿಗಿದೆ. ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರ ಗುರಿಯಾಗಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಮಾತನಾಡಿ, ಭಾರತೀಯ ರಂಗ ಪರಂಪರೆ ನಮ್ಮ ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿದೆ. ಸಾಂಸ್ಕೃತಿಕವಾಗಿ ಶಿಕ್ಷಣ ಮನರಂಜನೆ ನೀಡುವುದರ ಜತೆಗೆ ಶಿಸ್ತು, ಏಕಾಗ್ರತೆ ಸಾಧಿಸಲು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರೊ.ಎಂ.ಆರ್. ಜಯಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಚಾರ್ಯ ಎಚ್.ಎನ್. ಶಿವಕುಮಾರ್, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ, ರಂಗಸೌರಭ ಕಲಾ ಸಂಘದ ಅಧ್ಯಕ್ಷ ಡಾ.ಕೆ. ಮೋಹನ್‌ಕುಮಾರ್, ಬಾದರದಿನ್ನಿ ಆರ್ಟ್ಸ್ ಅಕಾಡೆಮಿ ಕಾರ್ಯದರ್ಶಿ ಪ್ರಕಾಶ್ ಬಾದರದಿನ್ನಿ, ಉಪನ್ಯಾಸಕರಾದ ಟಿ.ವೈ. ಗೀತಾ, ಒ.ಎಂ. ಮಂಜುನಾಥ, ಸಂಪನ್ಮೂಲ ವ್ಯಕ್ತಿ ಕೆ.ಪಿ.ಎಂ. ಗಣೇಶಯ್ಯ ಇದ್ದರು.

ವಿಶಾಲಾಕ್ಷಿ ಪ್ರಾರ್ಥಿಸಿದರು. ಪವಿತ್ರಾ ಸ್ವಾಗತಿಸಿ, ಎಸ್.ಪಿ. ಪರಿಮಳ ವಂದಿಸಿದರು. ಎಸ್.ಎಚ್. ಚೈತ್ರಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net