ಪರಿವರ್ತನ ಅಧ್ಯಯನ ಕೇಂದ್ರಕ್ಕೆ ಸಹಕಾರ

9feb45c1e4834ed98cb5c57e8636e01e
Published on

ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದ ಸಮೀಪದಲ್ಲಿರುವ ಪರಿವರ್ತನ ಅಧ್ಯಯನ ಕೇಂದ್ರಕ್ಕೆ ಡಾ.ಮಾರುತಿ ಅವರು ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ಡಾ.ಮಾರುತಿ ಅವರು ಮಾತನಾಡಿ, ಪರಿವರ್ತನ ಅಧ್ಯಯನ ಕೇಂದ್ರದಿಂದ ಈ ಭಾಗದ ವಿದ್ಯಾರ್ಥಿಗಳಿಗೆ ನೆರವಾಗುತ್ತಿರುವುದು ಅತ್ಯಂತ ಉತ್ತಮ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲೂ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಡಾ.ಪಿ.ದೇವರಾಜು, ಶಿಕ್ಷಕರಾದ ನಟರಾಜ್, ಕೆ.ಎಂ.ಮಹೇಶ್, ಕುಮಾರ್, ಪವನ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net