ಪರಿಶಿಷ್ಟ ಜಾತಿ ಸಮೀಕ್ಷೆದಾರರಿಗೆ ಸಹಕರಿಸಿ

13 ydg 03
Published on

ಯಾದಗಿರಿ: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಜಿಲ್ಲೆಯ ಪ್ರತಿಯೊಂದು ಪರಿಶಿಷ್ಟ ಜಾತಿ ಕುಟುಂಬದ ಸಮಗ್ರ ಸಮೀಕ್ಷೆ ಕೈಗೊಂಡು ಸಾಮಾಜಿಕ, ಶೈP್ಷÀಣಿಕ, ಆರ್ಥಿಕ, ರಾಜಕೀಯ ಮತ್ತು ಔದ್ಯೋಗಿಕವಾಗಿ ಪ್ರಾತಿನಿಧ್ಯತೆ ಇತ್ಯಾದಿ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ ಒಳ ಮೀಸಲಾತಿ ವರ್ಗೀಕರಣ ಮಾಡಲು ಸರ್ಕಾರ ಈ ಸಮೀಕ್ಷೆ ಕೈಗೊಳ್ಳುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ತಿಳಿಸಿz್ದÁರೆ.

ಸಮೀಕ್ಷೆದಾರರು ತಮ್ಮ ಮನೆಗೆ ಬಂದಾಗ ಅವರೊಂದಿಗೆ ಸಹಕರಿಸಿ ಅವರಿಗೆ ಬೇಕಾದ ವಿವರ ಪೂರ್ಣ ಸ್ಪಷ್ಟವಾಗಿ ನೀಡಿ. ಮೇ ೫ರಿಂದ ೧೭ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಮೇ ೧೯ರಿಂದ ೨೧ರವರೆಗೆ ವಿಶೇಷ ಶಿಬಿರಗಳನ್ನು ಕೈಗೊಂಡು ಭೇಟಿ ಅವಧಿಯಲ್ಲಿ ಬಿಟ್ಟು ಹೋದ ಕುಟುಂಬಗಳ ಮಾಹಿತಿ ಸಂಗ್ರಹಿಸಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ತಮ್ಮ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಥವಾ ತಹಸೀಲ್ದಾರ್ ಕಚೇರಿಗೆ ಸಂಪರ್ಕಿಸುವುAತೆ ಜಿ¯್ಲÁಡಳಿತ, ಜಿ¯್ಲÁ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಿP್ಷÀಣ ಇಲಾಖೆಗಳ ಮೂಲಕ ಕೋರಲಾಗಿದೆ ಎಂದು ಅವರು ತಿಳಿಸಿz್ದÁರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net