ಪರಿಶಿಷ್ಟ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ

application
Published on

ಚಿತ್ರದುರ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ ಮೂಲಕ 6ನೇ ತರಗತಿಗೆ ಆಯ್ಕೆ ಮಾಡಲಾಗುವುದು. ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಮೇ 3ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಸಂಬಂಧಿಸಿದ ಕಚೇರಿಗೆ ಸಲ್ಲಿಸಬೇಕು. ಏ.19 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ. 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆ ಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉಚಿತವಾಗಿ ಅರ್ಹತಾ ಪರೀಕ್ಷಾ ಮೂಲಕ ಪ್ರತಿಷ್ಠಿತ ಶಾಲೆಗಳಿಗೆ ಆಯ್ಕೆ ಮಾಡಲಾ ಗುವುದು. 6ನೇ ತರಗತಿಗೆ ಮಾತ್ರ ಜಿಲ್ಲೆಗೆ ನಿಗದಿಪಡಿಸಿರುವ ಗುರಿಗೆ ಅನುಗುಣವಾಗಿ ನಿಯಮಾನುಸಾರ ಪ್ರವೇಶ ಅವಕಾಶ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net