ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ಮುಖಾಂತರ 2025-26ನೇ ಸಾಲಿನ ಪರಿಶಿಷ್ಟಜಾತಿ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ (ಎಸ್.ಎಸ್.ಪಿ ಪೋರ್ಟಲ್) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಪೋರ್ಟಲ್ ತೆರೆದಿದ್ದು, ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್ ಅಥವಾ ಚಾಮರಾಜನಗರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.