ಪರಿಶಿಷ್ಟರ ಮೀಸಲಾತಿ ಹೆಚ್ಚಳದಿಂದ ಅನುಕೂಲ

22Kush03
ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಬಿಜೆಪಿ ಎಸ್ಟಿ ಮೋರ್ಚಾ ಸಭೆಯಲ್ಲಿ ಜಿಲ್ಲಾ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಮಾತನಾಡಿದರು. ಮನುಕುಮಾರ್ ರೈ, ರವಿ, ಬಿ.ಕೆ.ಮೋಹನ್, ಪ್ರಕಾಶ್ ಇತರರು ಇದ್ದರು.
Published on

ಕುಶಾಲನಗರ: ಸರ್ಕಾರ ಮೀಸಲಾತಿ ಹೆಚ್ಚಿಸಿರುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಪರಿಶಿಷ್ಟ ಸಮುದಾಯದವರು ಅವಕಾಶ ಪಡೆಯಲು ಸಾಧ್ಯವಾಗಲಿದೆ. ಎಸ್ಟಿ ಸಮುದಾಯದ ಮುಖಂಡರು ಸರ್ಕಾರದ ಉದ್ದೇಶಗಳನ್ನು ಅರಿತು ಪಕ್ಷ ಸಂಘಟನೆಗೆ ಸಹಕಾರ ನೀಡಬೇಕೆಂದು ಸೋಮವಾರಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ ಮನವಿ ಮಾಡಿದರು.


ಪಟ್ಟಣದ ಮಹಾಲಕ್ಷ್ಮೀ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಬಿಜೆಪಿ ಎಸ್ಟಿ ಮೋರ್ಚಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.


ಜಿಲ್ಲಾ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಮಾತಾಡಿ, ಎಸ್ಸಿ ಮತ್ತು ಎಸ್ಟಿ ಜನಾಂಗದವರಿಗೆ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಸ್ಟಿ ಸಮುದಾಯದವರಿಗೆ ವಿವಿಧ ಯೋಜನೆಗಳ ಮೂಲಕ ಹಲವು ಸೌಲಭ್ಯಗಳ ಜೊತೆಯಲ್ಲಿ ಗಿರಿಜನ ಅಭಿವೃದ್ಧಿ ವಿಶೇಷ ಯೋಜನೆಗಳ ಅಡಿಯಲ್ಲಿ ಹೈನುಗಾರಿಕೆ ಮತ್ತು ಹಾಡಿಯ ಜನರಿಗೆ ವಿವಿಧ ಸವಲತ್ತುಗಳನ್ನು ಒದಗಿಸುತ್ತಿದೆ. ಎರಡೂ ತಾಲೂಕಿನಲ್ಲಿ ಸಾವಿರಾರು ಎಸ್ಟಿ ಕುಟುಂಬದವರು ವಿವಿಧ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಮುದಾಯದ ಮನೆಗಳ ಹಕ್ಕು ಪತ್ರ ಸೇರಿದಂತೆ ಇಲಾಖೆ ವತಿಯಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.


ಸೋಮವಾರಪೇಟೆ ತಾಲೂಕು ಎಸ್ಟಿ ಮೋರ್ಚಾ ಅಧ್ಯಕ್ಷ ರವಿ ಅಧ್ಯಕ್ಷತೆ ವಹಿಸಿದ್ದರು. ಎಸ್ಟಿ ರಾಜ್ಯ ಸಮಿತಿ ಸದಸ್ಯ ಬಿ.ಕೆ.ಮೋಹನ್, ಜೇನು ಕುರುಬ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಪ್ರಕಾಶ್, ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ರೈತ ಮೋರ್ಚಾ ಅಧ್ಯಕ್ಷ ಜಗದೀಶ್, ತಾಲೂಕು ಎಸ್ಟಿ ಮೋರ್ಚಾ ಕಾರ್ಯದರ್ಶಿ ನಾಗೇಶ್, ಉಪಾಧ್ಯಕ್ಷ ಮಲ್ಲೇಶ್, ಸೋಲಿಗರ ಸಮಿತಿ ತಾಲೂಕು ಅಧ್ಯಕ್ಷ ಕುಮಾರ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯೆ ಉಮಾ, ಕೂಡುಮಂಗಳೂರು ಗ್ರಾಪಂ ಸದಸ್ಯ ಕೆ.ಆರ್.ಕುಮಾರ್, ಹೊಸಕೋಟೆ ಗ್ರಾಪಂ ಸದಸ್ಯೆ ಸೀತೆ, ಜಿಲ್ಲಾ ಘಟಕದ ಸದಸ್ಯರಾದ ಚಿಕ್ಕಯ್ಯ ಪುಟ್ಟಸ್ವಾಮಿ, ಲೋಕೇಶ್, ಸಮುದಾಯದ ಮುಖಂಡರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net