ಪರಿಶಿಷ್ಟರ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆ ಬೀದಿನಾಟಕದ ಮೂಲಕ ಅರಿವು

12 ckm 6
ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಹಾಗೂ ಇತರೆ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಸುಮಂತ್ ಚಾಲನೆ ನೀಡಿದರು. ಎಚ್.ಡಿ.ರೇವಣ್ಣ, ವಿಜಯಕುಮಾರ್, ನಂದಿನಿ ಶೆಟ್ಟಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದವರ ಮೇಲೆ ಸವರ್ಣೀಯರಿಂದ ನಡೆಯುವ ದೌರ್ಜನ್ಯದ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಈ ಸಾಮಾಜಿಕ ಪಿಡುಗನ್ನು ತೊಡೆದುಹಾಕಲು ಬೀದಿನಾಟಕದ ಮೂಲಕ ಸಾರ್ಥಕ ಪ್ರಯತ್ನ ಮಾಡಲಾಗುತ್ತಿದೆ ಎಂದು ತಹಸೀಲ್ದಾರ್ ಸುಮಂತ್ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಬುಧವಾರ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ನವಜೀವನ ಚಾರಿಟೇಬಲ್ ಸೇವಾ ಸಂಸ್ಥೆ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ನಾಗರೀಕ ಹಕ್ಕು ರಕ್ಷಣಾ ಕಾಯಿದೆ ೧೯೫೫, ೧೯೮೯ ನಿಯಮ ೧೯೯೫ ತಿದ್ದುಪಡಿ ನಿಯಮಗಳು ೨೦೧೩ ರಂತೆ ೧೭(ಎ) ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಹಾಗೂ ಇತರೆ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಶಿಕ್ಷೆ ಆಗುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್ ಮಾತನಾಡಿ, ಸವರ್ಣೀಯರಿಂದ ಪರಿಶಿಷ್ಟ ಜನಾಂಗದವರ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ ಬೀದಿನಾಟಕದ ಮೂಲಕ ಅರಿವು ಮೂಡಿಸಲಾಗುತ್ತಿದೆ. ತಾಲೂಕಿನ ಎಲ್ಲಾ ೨೦ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ೫ ದಿನಗಳ ಕಾಲ ಈ ಜನಜಾಗೃತಿ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

ಮಹಿಳಾ ಠಾಣೆಯ ಸಬ್ ಇನ್ಸ್ಪೆಕ್ಟರ್ ನಂದಿನಿಶೆಟ್ಟಿ ಮಾತನಾಡಿ, ಪರಿಶಿಷ್ಟ ಜನಾಂಗದವರ ಮೇಲೆ ದೌರ್ಜನ್ಯ ನಡೆಯುತ್ತಿರುವ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಶ್ಲಾಘನೀಯ. ಎಲ್ಲಿಯಾದರೂ ದೌರ್ಜನ್ಯ ಪ್ರಕರಣ ನಡೆದಿರುವುದು ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಸರ್ಕಾರದ ನಿಯಮದಂತೆ ಇಲಾಖೆ ವತಿಯಿಂದ ಈ ಜನಾಂಗದವರಿಗೆ ಸಂಪೂರ್ಣ ರಕ್ಷಣೆ ಒದಗಿಸಲು ಬದ್ಧವಾಗಿರುವುದಾಗಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಡಿ ರೇವಣ್ಣ ಮಾತನಾಡಿ, ಪರಿಶಿಷ್ಟ ಜನರು ವಾಸಿಸುವ ಎಲ್ಲಾ ಸ್ಥಳಗಳಲ್ಲಿ ಅವರ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಸರ್ಕಾರದ ಆದೇಶದಂತೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.

ಇAದಿನಿAದ ತಾಲೂಕಿನ ೨೦ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜನಾಂಗದವರು ವಾಸಿಸುವ ಗ್ರಾಮಗಳಲ್ಲಿ ನಡೆಯುವ ದೌರ್ಜನ್ಯಗಳ ಬಗ್ಗೆ ಸವರ್ಣೀಯರಲ್ಲಿ ಅರಿವು ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿ ಎಂದು ಹೇಳಿದರು.

ನಾಗರೀಕ ಸಮಾಜದಲ್ಲಿ ನಾವೆಲ್ಲಾ ಒಂದೇ ಎಂಬ ಭಾವನೆ ಮೂಡಿಸಲು ಈ ಕಾರ್ಯಕ್ರಮದ ಮೂಲಕ ಜನರಲ್ಲಿ ಅರಿವು, ಜಾಗೃತಿ ಮೂಡಿಸಲು ಕಲಾ ತಂಡಗಳೊAದಿಗೆ ಬೀದಿನಾಟಕವನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಠಾಣೆಯ ಪೇದೆಗಳಾದ ಗಾಯಿತ್ರಿ, ಮಂಜುಳ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net