ಪರಿಶಿಷ್ಟರ ಹಣ ಗ್ಯಾರಂಟಿಗೆ ಬಳಕೆ ಖಂಡಿಸಿ ಹೋರಾಟದ ಎಚ್ಚರಿಕೆ

6 ckm 4 kuruvangi venkatesh
ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್
Published on

ಚಿಕ್ಕಮಗಳೂರು: ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿಯಿಂದ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೩೯ ಸಾವಿರ ಕೋಟಿ ರೂ ಎಸ್‌ಸಿ, ಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ರಾಜ್ಯಸರ್ಕಾರ ಬಳಸಿರುವುದರ ವಿರುದ್ಧ ಆಜಾದ್ ವೃತ್ತದಲ್ಲಿ ಆ. ೧೩ರಂದು ಬೆಳಗ್ಗೆ ೧೧ ಗಂಟೆಯಿAದ ಆ. ೧೪ರಂದು ಬೆಳಗ್ಗೆ ೧೧ ಗಂಟೆವರೆಗೆ ಅಹೋರಾತ್ರಿ ಧರಣಿ ನಡೆಸಲಾಗುವುದು. ಇದಲ್ಲದೆ ಆ. ೧೫ರ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ಹಾಜರಾಗುವುದಾಗಿ ಎಚ್ಚರಿಕೆ ನೀಡಿದರು.

ಅಂಬೇಡ್ಕರ್ ಭವನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಸಂಪೂರ್ಣ ಅಭಿವೃದ್ಧಿಪಡಿಸಿ ಒಂದು ಮಾದರಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕೆಂದು ಸ್ಥಳೀಯ ಶಾಸಕ ಎಚ್.ಡಿ. ತಮ್ಮಯ್ಯ ಅವರನ್ನು ಆಗ್ರಹಿಸಿದರು.

ವಿಧಾನಸಭಾ ಕ್ಷೇತ್ರದಲ್ಲಿ ೫೨ ಅಂಬೇಡ್ಕರ್ ಭವನದಲ್ಲಿ ೨೭ ಕಾಮಗಾರಿಗಳು ಆರಂಭವಾಗಿಲ್ಲ. ಹೆಚ್ಚುವರಿಯಾಗಿ ೨೫ ಅಂಬೇಡ್ಕರ್ ಭವನ ನಿರ್ಮಿಸಲು ಒಟ್ಟು ೬ ಕೋಟಿ ಅನುದಾನದಲ್ಲಿ ೧ ಕೋಟಿ ರೂ. ಗಳನ್ನು ಮಾತ್ರ ಸಂಬAಧಪಟ್ಟ ಇಲಾಖೆಗೆ ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.

ಈವರೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೈಗೊಳ್ಳಲಾಗುವ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿಲ್ಲ. ಆಗಸ್ಟ್ ತಿಂಗಳಾದರೂ ನಿಗಮದಿಂದ ಯಾವುದೇ ಅಧಿಸೂಚನೆ ಹೊರಡಿಸಿಲ್ಲ ಎಂದು ಆರೋಪಿಸಿದರು.

ನಮ್ಮ ಹಕ್ಕಿಗಾಗಿ ಸಮಾಜದ ಪರವಾಗಿ ಸರ್ಕಾರದ ಗಮನ ಸೆಳೆಯಲು ಆಯೋಜಿಸಿರುವ ಈ ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಹೊರತುಪಡಿಸಿ ದಲಿತಪರವಾದ ಚಿಂತಕರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸೀತಾರಾಮ ಭರಣ್ಯ, ಹಂಪಯ್ಯ, ಕೊಲ್ಲಾಬೋವಿ, ಕೇಶವ, ಬೀರಪ್ಪ, ಕೃಷ್ಣಮೂರ್ತಿ, ರೇವನಾಥ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net