ಪರಿಶ್ರಮಪಟ್ಟು ಓದಿದರೆ ಸಾಧನೆ ಸಾಧ್ಯ

08 SIRAGUPPA 01
Published on

ಸಿರಗುಪ್ಪ: ಸತತ ಪರಿಶ್ರಮದಿಂದ ಉತ್ತಮ ಸಾಧನೆ ಮಾಡಲು ಸಾಧ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆ ತೋರಲು ಉತ್ತೇಜಿಸುವ ಸಲುವಾಗಿ ಎಸ್‌ಡಿಎಂಸಿ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಇ.ಎಸ್.ಮಂಜುನಾಥ ಹೇಳಿದರು.

ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ರಾಜೇಶ್ವರಿ 611(97.76), ಶಿವಕಿರಣ್ 598 (95.68), ಕಾವೇರಿ 586 (93.76) ಅವರನ್ನು ಸನ್ಮಾನಿಸಿ ಮಾತನಾಡಿದರು.

ವಿದ್ಯಾರ್ಥಿನಿ ರಾಜೇಶ್ವರಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯಲು ಪಟ್ಟಣದಲ್ಲಿ ಆಯೋಜಿಸಿದ್ದ ಎರಡು ತಿಂಗಳ ಉಚಿತ ಬೇಸಿಗೆ ತರಬೇತಿ ಶಿಬಿರ ಹಾಗೂ ನಮ್ಮ ಶಾಲೆಯ ಶಿಕ್ಷಕರ ಮಾರ್ಗದರ್ಶನ ಕಾರಣ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net