ಪರಿಷತ್ ಚುನಾವಣೆ ಗಂಭೀರ ಪರಿಗಣನೆ

Khamitkar
Published on

ಕಲಬುರಗಿ: ವಿಧಾನ ಪರಿಷತ್ ಚುನಾವಣೆಯನ್ನು ಗಂಭೀರ ಪರಿಗಣಿಸಿದ್ದು, ನಾಡಿನ ಪ್ರಬುದ್ಧ ಮತದಾರರು ಬಿಜೆಪಿಗೆ ಬೆಂಬಲಿಸುವ ವಿಶ್ವಾಸವಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ಖಮಿತಕರ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಬುದ್ಧ ಪದವೀಧರರ ಸಭೆಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಮತಯಾಚಿಸಿದ ಅವರು, ಕ್ಷೇತ್ರ ಬಿಜೆಪಿ ಭದ್ರಕೋಟೆ. ಹಿಂದಿನ ಇತಿಹಾಸ ಅವಲೋಕಿಸಿದಾಗ ಡಾ.ಎಂ.ಆರ್. ತಂಗಾ ಆದಿಯಾಗಿ ಬಹುತೇಕ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಯುವಕರು, ಪದವೀಧರರ ಸಮಸ್ಯೆಗಳಿಗೆ ನಮ್ಮ ಅಭ್ಯರ್ಥಿಗಳು ಸ್ಪಂದಿಸುತ್ತಾರೆAಬ ವಿಶ್ವಾಸದೊಂದಿಗೆ ಕೈಬಲಪಡಿಸಿದ್ದೀರಿ. ಈ ಬಾರಿ ಅಮರನಾಥ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ವಿಶೇಷವಾಗಿ ಕಲಬುರಗಿಯಲ್ಲಿ ಅನಾಹುತಗಳು ನಡೆಯುತ್ತಿವೆ. ಇತ್ತೀಚೆಗೆ ಒಂದಿಬ್ಬರನ್ನು ಬೆತ್ತಲೆ ಮಾಡಿ ವಿದ್ಯುತ್ ಶಾಕ್ ನೀಡಿದ ದೃಶ್ಯಾವಳಿ ನೋಡಿದರೆ ಭಯ ಕಾಡುತ್ತಿದೆ. ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ. ಬಿಹಾರದ ಗೂಂಡಾ ರಾಜ್ ನೆನಪಾಗುತ್ತಿದೆ. ಅಧಿಕಾರದ ದರ್ಪ ಹೆಚ್ಚಾಗಿದೆ. ಜನ ಸಹಿಸಿಕೊಳ್ಳುವ ಮನಸ್ಥಿತಿಯಿಂದ ಹೊರಬರಬೇಕು ಎಂದು ಕರೆ ನೀಡಿದರು.
ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂಬ ಸವಾಲು, ಸಂಕಲ್ಪದೊAದಿಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡಿz್ದÉÃನೆ. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಆಶೀರ್ವಾದ ನಮಗಿರಬೇಕು ಎಂದರು.
ಮುಖAಡ ಸುರೇಶ ಸಜ್ಜನ್ ಪ್ರಾಸ್ತಾವಿಕ ಮಾತನಾಡಿ, ನಾನು ಕ್ಷೇತ್ರದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನದಂತೆ ವಾಪಸ್ ಪಡೆದು ಇದೀಗ ಅಮರನಾಥ ಪರ ಕೆಲಸ ಮಾಡುತ್ತಿz್ದÉÃನೆ. ಎಲ್ಲರೂ ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಕೋರಿದರು.
ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಸಚಿವ ಮುರುಗೇಶ ನಿರಾಣಿ, ಸಂಸದ ಡಾ.ಉಮೇಶ ಜಾಧವ್, ಪಕ್ಷದ ಅಭ್ಯರ್ಥಿ ಅಮರನಾಥ ಪಾಟೀಲ್ ಮಾತನಾಡಿ ಮತಯಾಚಿಸಿದರು.
ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದÉÃವಾಡಗಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಎಂಎಲ್‌ಸಿಗಳಾದ ಶಶೀಲ್ ನಮೋಶಿ, ಸುನೀಲ್ ವಲ್ಲಾÈಪುರೆ, ಹಣಮಂತ ನಿರಾಣಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಸಚಿವ ಬಾಬುರಾವ್ ಚವ್ಹಾಣ್, ಕುಡಾ ಮಾಜಿ ಅಧ್ಯಕ್ಷ ದಯಾಘನ್ ಧಾರವಾಡಕರ್, ಧರ್ಮಣ್ಣ ದೊಡ್ಮನಿ, ಜೆಡಿಎಸ್ ಮುಖಂಡ ಕೃಷ್ಣಾರಡ್ಡಿ, ಅವ್ವಣ್ಣ ಮ್ಯಾಕೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net