ಪರಿಷತ್ ಸದಸ್ಯ ಸ್ಥಾನಕ್ಕೆ ನಂಜುಡಿ ರಾಜೀನಾಮೆ

IMG_20240423_092451
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
ಬಿಜೆಪಿ ಮುಖಂಡ ಕೆ.ಪಿ.‌ನಂಜುಡಿ ಹುಬ್ಬಳ್ಳಿಯಲ್ಲಿ ಮಂಗಳವಾರ ವಿಧಾನ‌ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಹುಬ್ಬಳ್ಳಿ ಯಲ್ಲಿರುವ ವಿಧಾನ‌ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ಆಗಮಿಸಿ ಅವರು ರಾಜೀನಾಮೆ ಪತ್ರ ಸಲ್ಲಿಸಿದರು. ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ‌ಯವರು ನನ್ನನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ನೀಡಲಿಲ್ಲ. ಪಕ್ಷದ  ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದೇನೆ.  ಬುಧವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net