ಪರಿಸರ ಉಳಿಸಿ ಬೆಳೆಸಿ

bkt-6-5.
ಬಾಗಲಕೋಟೆ ತಾಲೂಕಿನ ಕದಾಂಪುರ (ಪು.ಕೇ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯ ನೇರಳೆ ಉದ್ಘಾಟಿಸಿದರು
Published on

ಬಾಗಲಕೋಟೆ: ಮುಂದಿನ ಪೀಳಿಗೆಗೆ ಪರಿಸರವನು ಉಳಿಸಿ ಬೆಳೆಸಲು ಕಾರ್ಯವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯ ನೇರಳೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ತಾಲೂಕಿನ ಕದಾಂಪೂರ (ಪು.ಕೇ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಭೂ ಮರುಸ್ಥಾಪನೆ, ಮರುಭೂಮೀಕರಣ ಹಾಗೂ ಬರ ತಡೆಯುವಿಕೆ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ ನೆಮ್ಮಲ್ಲರ ಉಸಿರು. ಅರಣ್ಯ ಉಳಿದರೇ ನಾಡು ಉಳಿಯುತ್ತದೆ. ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಕಾಡುಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ನೀರು, ಹವಾಮಾನ, ಭೂಮಿ ಮಾಲಿನ್ಯವಾಗದಂತೆ ಕಾಪಾಡಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಹುಟ್ಟು ಹಬ್ಬದಂದು ಸಸಿಗಳನ್ನು ನೆಟ್ಟು ಪೋಷಿಸಬೇಕು. ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮ ಮೇಲಿನ ಜವಾಬ್ದಾರಿಯಾಗಿರುತ್ತದೆ. ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಎಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ದೈನಂದಿನ ಜೀವನ ಶೈಲಿಯಲ್ಲಿ ಪರಿಸರ ಪೂರಕ ಕ್ರಮಗಳನ್ನು ಅಳವಡಿಸಿಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ಪರಿಸರ ಸಂರಕ್ಷಣೆಯ ಕುರಿತು ಅಷ್ಟೇ ಅಲ್ಲದೇ ಕಾನೂನಿನ ಕುರಿತು ಅರಿವು ಮೂಡಿಸಿದರು. ಬಾಗಲಕೋಟೆ ಜಿಲ್ಲೆಯಾದ್ಯಂತ ಶಾಲಾ ಶಿಕ್ಷಣ ಇಲಾಖೆ ಜೊತೆಗೂಡಿ ಸರ್ಕಾರಿ ಶಾಲೆಗಳ ಆವರಣದಲ್ಲಿ ಒಂದು ಲಕ್ಷ ಸಸಿ ನೆಡುವ ಗುರಿ ಇದ್ದು, ಎಲ್ಲ ಇಲಾಖೆಯವರು ಸಹಕಾರ ನೀಡಬೇಕೆಂದು ತಿಳಿಸಿದರು.

ಪ್ರಾರಂಭದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ ಮಾತನಾಡಿ, ಎಲ್ಲರೂ ಪರಿಸರ ಸ್ನೇಹಿ ಜೀವನ ಅಳವಡಿಸಿಕೊಂಡಲ್ಲಿ ಪರಿಸರ ಸಂರಕ್ಷಣೆ ಸಾಧ್ಯ ಎಂದು ತಿಳಿಸಿದರು. ನೀರಲಕೇರಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಮಂಜುಳಾ ಕುಷ್ಠಗಿ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ.ನಂದನೂರ, ೧ನೇ ಹೆಚ್ಚುವರಿ ಹಿರಿಯ ದಿವಾಣ ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜಿ.ಮಿರ್ಜಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರೂಪಾ ವಿ.ಕೆ, ಕ್ಷೇತ್ರ ಶಿಕ್ಷಣಾಽಕಾರಿ ಎಂ.ಎಸ್.ಬಡದಾನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net