ಪರಿಸರ ಮಹತ್ವದ ಕುರಿತು ಅರಿವು ಬೆಳೆಸಿಕೊಳ್ಳಿ

ಪರಿಸರ ಮಹತ್ವದ ಕುರಿತು ಅರಿವು ಬೆಳೆಸಿಕೊಳ್ಳಿ
Published on

ಅರಕಲಗೂಡು: ವಿದ್ಯಾರ್ಥಿಗಳು ಪರಿಸರದ ಮಹತ್ವದ ಕುರಿತು ಅರಿವು ಬೆಳೆಸಿಕೊಳ್ಳಬೇಕು ಎಂದು ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರದೀಪ್ ರಾಮಸ್ವಾಮಿ ಕಿವಿಮಾತು ಹೇಳಿದರು.

ತಾಲೂಕಿನ ಚಿಕ್ಕಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನೊಂದಿಗೆ ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ದಿಸೆಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಪ್ರವೃತ್ತಿ ಬೆಳೆಸಿಕೊಂಡು ಪರಿಸರ ಉಳಿಸುವ ಸಂಕಲ್ಪ ಮಾಡಬೇಕು ಎಂದು ಸಲಹೆ ನೀಡಿದರು.

ಸಿಆರ್‌ಪಿ ದೇವರಾಜು, ಎಸ್‌ಡಿಎಂಸಿ ಅಧ್ಯಕ್ಷ ವೀರೇಶ್, ಮುಖ್ಯ ಶಿಕ್ಷಕ ನಾಗೇಂದ್ರ, ಸಹ ಶಿಕ್ಷಕರಾದ ರೂಪಾ, ಸುಶ್ಮಿತಾ, ನಿವೃತ್ತ ಪ್ರಾಂಶುಪಾಲ ಬಸವರಾಜು, ತಾಪಂ ಮಾಜಿ ಸದಸ್ಯ ಸಿದ್ದರಾಮೇಗೌಡ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net