

ಚನ್ನಪಟ್ಟಣ : ಪರಿಸರಕ್ಕೆ ವಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಪ್ರತಿಯೊಬ್ಬರೂ ತ್ಯಜಿಸಬೇಕು. ಆ ಮೂಲಕ ಪ್ಲಾಸ್ಟಿಕ್‌ಮುಕ್ತ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ನಗರಸಭೆ ಪೌರಾಯುಕ್ತ ಶಿವನಂಕರಿಗೌಡ ಕರೆ ನೀಡಿದರು.
ನಗರದ ನಗರಸಭೆ ಆವರಣದಲ್ಲಿ ಪ್ಲಾಸ್ಟಿಕ್ ನಿಷೇಧ ಜಾಗೃತಿ ಜಾಥಾಕ್ಕೆ ಶನಿವಾರ ಚಾಲನೆ ನೀಡಿ ವಾತನಾಡಿದ ಅವರು, ಪ್ಲಾಸ್ಟಿಕ್ ನಿಷೇಧ ಹಾಗೂ ಪರಿಸರ ರಕ್ಷಣೆ ಜವಾಬ್ದಾರಿ ಕೇವಲ ಸರ್ಕಾರ ಹಾಗೂ ಸ್ಥಳೀಯ ಆಡಳಿತದ್ದು ಎಂಬ ಮನೋಭಾವದಿಂದ ಹೊರಬರಬೇಕು. ಸಾರ್ವಜನಿಕರು ತಮ್ಮ ಹೊಣೆ ಅರಿತು ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಮನವಿ ವಾಡಿದರು.
ಪ್ಲಾಸ್ಟಿಕ್ ಪರಿಸರಕ್ಕೆ ವಾರಕ. ಭೂಮಿಯಲ್ಲಿ ಕೊಳೆಯದ ಇದು, ದಹಿಸಿದಾಗ ವಿಷಕಾರಕ ಅಂಶಗಳನ್ನು ಪರಿಸರಕ್ಕೆ ಬಿಡುಗಡೆ ವಾಡುತ್ತದೆ. ಇದರಿಂದ ಕ್ಯಾನ್ಸರ್ ಸೇರಿ ಹಲವು ವಾರಣಾಂತಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವ ಸಂಕಲ್ಪ ಮಾಡಬೇಕು ಎಂದರು.
ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಜಾಥಾದಲ್ಲಿ ಬಾಲು ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹಾಗೂ ಒನ್ ಭೂಮಿ ೌಂಡೇಷನ್ ಸಂಸ್ಥೆ ಪದಾಧಿಕಾರಿಗಳು ಭಾಗವಹಿಸಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ಸಂಚರಿಸಿತು. ಕೈಯಲ್ಲಿ ಭಿತ್ತಿಪತ್ರ ಹಿಡಿದ ವಿದ್ಯಾರ್ಥಿಗಳು ಜಾಥಾದುದ್ದಕ್ಕೂ ಪ್ಲಾಸ್ಟಿಕ್ ವಿರುದ್ಧ ೋಷಣೆಗಳನ್ನು ಮೊಳಗಿಸಿದರು. ನಗರಸಭೆ ಸದಸ್ಯರಾದ ನಾಗೇಶ್, ಕೇಬಲ್ ಮಹದೇವ, ನಗರಸಭೆ ಎಇಇ ಮೀನಾಕ್ಷಿ, ಆರೋಗ್ಯ ನಿರೀಕ್ಷಕರರಾದ ಶಿವಕುವಾರ್, ವರಲಕ್ಷ್ಮೀ, ನವಾಜ್, ರಾಜೇಶ್ವರಿ, ಕಾಂತರಾಜು, ಒನ್ ಭೂಮಿ ೌಂಡೇಷನ್‌ನ ನವನೀತ್, ರಂಜಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದಂಡ ವಿಧಿಸಿ: ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ವಾತನಾಡಿ, ಪರಿಸರ ಪ್ರಜ್ಞೆ ಹಾಗೂ ಕಾಳಜಿ ಪ್ರತಿಯೊಬ್ಬರಲ್ಲಿ ಮನೆ ವಾಡಿದಾಗ ಹಲವು ಸಮಸ್ಯೆಗಳಿಂದ ಮುಕ್ತವಾಗಬಹುದು. ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆ ಅತಿಯಾಗಿದ್ದು, ಭವಿಷ್ಯದಲ್ಲಿ ದೊಡ್ಡ ಗಂಡಾಂತರಕ್ಕೆ ಕಾರಣವಾಗಲಿದೆ. ಹಾಗಾಗಿ ಪ್ಲಾಸ್ಟಿಕ್ ಬಳಕಿ ನಿಲ್ಲಿಸಿ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಮುಂದಾಗಬೇಕು ಎಂದರು. ಸರ್ಕಾರ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಿದ್ದರೂ ಬಳಕೆಗೆ ಕಡಿವಾಣ ಬೀಳುತ್ತಿಲ್ಲ. ಪ್ಲಾಸ್ಟಿಕ್ ವಾರಾಟಗಾರರ ವಿರುದ್ಧ ನಗರಸಭೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.