ಪರಿಸರ ಮಾಲಿನ್ಯ ಜಾಗೃತಿ ಕಾರ್ಯಕ್ರಮ

5
Published on

ಮೈಸೂರು: ರಾಜ್ಯ ಅರಣ್ಯ ಪರಿಸರ ಮತ್ತು ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಪರಿಸರ ಮಾಲಿನ್ಯ ಜಾಗೃತಿ ಕಾರ್ಯಕ್ರಮ ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಡೆಯಿತು.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಿದರು. ಹಾಸನದ ಬಿ.ಟಿ.ಮಾನವ ತಂಡದ ವತಿಯಿಂದ ಪರಿಸರ ಮಾಲಿನ್ಯ ಕುರಿತು ಅರಿವು ಮೂಡಿಸಲು ಬೀದಿ ನಾಟಕ ನಡೆಯಿತು.

ವೇದಿಕೆ ಅಧ್ಯಕ್ಷ ಕೆ.ಎನ್.ಮಂಜುನಾಥ್, ಗೌರವಾಧ್ಯಕ್ಷ ಟಿ.ಹೊಂಬೆಗೌಡ, ಪ್ರಧಾನ ಕಾರ್ಯದರ್ಶಿ ಬಾಣವಾರ ಉಮೇಶ್, ಪರಿಸರ ಅಧಿಕಾರಿ ಗಣೇಶನ್ ಇನ್ನಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net