ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

05 YERRISWAMY 06
Published on

ಬಳ್ಳಾರಿ : ಭೂಮಿಯನ್ನು ಸಹಜ ಸ್ಥಿತಿಗೆ ತರಲು ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಪೋಷಿಸಬೇಕು. ಪರಿಸರ ರಕ್ಷಣೆಯು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಡಿಎಚ್‌ಒ ಡಾ.ವೈ.ರಮೇಶ ಬಾಬು ತಿಳಿಸಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಹವಾಮಾನ ವೈಪರಿತ್ಯ, ಮಾನವ ಆರೋಗ್ಯ ಕಾರ್ಯಕ್ರಮ ಮತ್ತು ಡಿವಿಬಿಡಿಸಿಪಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭೂಮಿ ಮರು ಸ್ಥಾಪನೆ, ಮರುಭೂಮೀಕರಣ ಹಾಗು ಬರ ಸ್ಥಿತಿ ಸ್ಥಾಪಕತ್ವ ಎಂಬ ಧ್ಯೇಯವಾಕ್ಯದೊಂದಿಗೆ ಬುಧವಾರ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಾಣ ಮಾಡುವಲ್ಲಿ ಎಲ್ಲರೂ ಪ್ಲಾಸ್ಟಿಕ್ ಬಳಕೆಯನ್ನು ಕಡಿತಗೊಳಿಸಬೇಕು. ತಮ್ಮ ಮನೆ ಆವರಣದಲ್ಲಿ ಗಿಡಗಳನ್ನು ನೆಡಬೇಕು ಎಂದರು.
ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಿದ್ದಲ್ಲಿ ಮುಂದಿನ ಪೀಳಿಗೆಗೆ ಒಳ್ಳೆಯ ಜೀವನವನ್ನು ನೀಡಲು ಸಹಾಯಕವಾಗುತ್ತದೆ. ಆರೋಗ್ಯ ಸಂಸ್ಥೆಗಳಲ್ಲಿ ಸಾರ್ವಜನಿಕ ಹಾಗೂ ಪರಿಸರ ಆರೋಗ್ಯ ಹಿತದೃಷ್ಠಿಯಿಂದ ಆವರಣದ ಸುತ್ತ-ಮುತ್ತ ಸ್ವಚ್ಛತಾ ಕಾರ್ಯ, ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಬೇಕು. ಸಂಸ್ಥೆಗಳ ಮೇಲ್ಚಾವಣಿ ಸ್ವಚ್ಚಗೊಳಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net