ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆಗೆ ಡಿಸಿ ಮನವಿ

DCCCCC
Published on

ಚಿತ್ರದುರ್ಗ: ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿಗಳ ಕಡ್ಡಾಯ ಪಾಲನೆ ಮೂಲಕ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯನ್ನಾಗಿ ಆಚರಿಸು ವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ನಾಗರಿಕರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪಿಒಪಿ ಯಿಂದ ತಯಾರಿಸುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜಿಸದಂತೆ ಕೋರಿದ್ದಾರೆ.

ಈ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕೆ ಎಲ್ಲ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂ ಅಧಿಕಾರಿಗಳಿಗೆ ಹಾಗೂ ಬೇರೆ ಊರುಗಳಿಂದ ಮತ್ತು ರಾಜ್ಯಗಳಿಂದ ಬರುವಂತಹ ಪಿಒಪಿ ವಿಗ್ರಹಗಳನ್ನು ನಿಯಂತ್ರಿಸುವಂತೆ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ವಿಸರ್ಜಿಸದೆ ಉಳಿದಿರುವ,ಮಾರಾಟಕ್ಕೆ ಸಿದ್ಧವಾಗಿರುವ ಪಿಒಪಿ ಅಥವಾ ಲೋಹ ಮಿಶ್ರಿತ ಬಣ್ಣದ ವಿಗ್ರಹಗಳನ್ನು ಸುಪರ್ದಿಗೆ ತೆಗೆದುಕೊಂಡು ಘನ ತ್ಯಾಜ್ಯವಿಲೇವಾರಿ ಘಟಕಗಳಿಗೆ ಸಾಗಿಸಿ ವಿಲೇವಾರಿಮಾಡುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದಾರೆ.

ಉತ್ಸವ ಮೂರ್ತಿ ಬಿಡುವ ಕೆರೆ,ಕಲ್ಯಾಣಿ ಮತ್ತು ಸ್ಥಳಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವುದು ಹಾಗೂ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಕಲ್ಯಾ ಣಿಗಳ ಪಕ್ಕದಲ್ಲಿ ಹಸಿ ಕಸ(ಹೂವು,ಹಣ್ಣು,ಬಾಳೆಕಂಬ,ಮಾವಿನ ತೋರಣ,ಇತ್ಯಾದಿ)ಪ್ರತ್ಯೇಕಿಸಿ ಪ್ರತ್ಯೇಕ ವಿಲೇವಾರಿಗೆ ಕ್ರಮವಹಿಸುವಂತೆ ಸೂಚಿಸಿದ್ದಾರೆ. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಸೂಕ್ತ ಅನುಮತಿ ಕಡ್ಡಾಯ. ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

-----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net