ಪರಿಸರ ಸ್ನೇಹಿ ಗಣೇಶ ಹಬ್ಬದಾಚರಣೆಗೆ ಎಡಿಸಿ ಮನವಿ

20230831_114209 (1)--001
Published on


ಚಿತ್ರದುರ್ಗ: ಪಿಒಪಿ,ಲೋಹ ಮಿಶ್ರೀತ ಬಣ್ಣದ ಗಣಪತಿ ವಿಗ್ರಹಗಳ ಬಳಕೆಗೆ ಸಂಪೂರ್ಣ ನಿಷೇಧವಿದೆ. ಜಲಮೂಲಗಳ ಮಾಲಿನ್ಯಕ್ಕೆ ಕಾರಣವಾ ಗುವ ವಿಗ್ರಹಗಳ ಬಳಕೆ ಬೇಡ,ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬವನ್ನು ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾ ಮಿ ನಾಗರಿಕರಿಗೆ ಮನವಿ ಮಾಡಿದರು.
ಗಣೇಶ ಹಬ್ಬದಾಚರಣೆ ಹಿನ್ನೆಲೆ ಡಿಸಿ ಕಚೇರಿಯಲ್ಲಿ ಗುರುವಾರ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ನಿಷೇಧಿತ ಗಣಪತಿ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಯಂತ್ರಿಸುವಂತೆ ಪೊಲೀಸ್ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಿಷೇಧಿತ ಗಣೇಶ ವಿಗ್ರಹಗಳ ಮಾರಾಟದೆಡೆ ನಿಗಾ ಇರಲಿ,ಜಿಲ್ಲೆಗೆ ಪಿಒಪಿ ಗಣೇಶ ವಿಗ್ರಹಗಳ ಸಾಗಾಣಿಕೆ ತಡೆಗೆ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಮಾಡಬೇಕು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳು ಪಿಒಪಿ ಗಣಪತಿ ಮಾರಾಟಕ್ಕೆ ಅವಕಾಶ ಕೊಡಬಾರದು. ಕಂ ಡು ಬಂದಲ್ಲಿ ಕೂಡಲೇ ಅವುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಬೇಕೆಂದರು.
ಅನುಮತಿ ಕಡ್ಡಾಯ
ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ. ಪ್ಲಾಸ್ಟಿಕ್ ವಸ್ತುಗಳ ಬಳಕೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧಿಸಬೇಕು.ಕೋಮು ಸೌಹಾರ್ದತೆಗೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಾಂತಿ ಸಭೆಗಳನ್ನು ನಡೆಸು ವಂತೆ ಪೊಲೀಸರಿಗೆ ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳು,ಗ್ರಾಪಂಗಳ ವ್ಯಾಪ್ತಿಯಲ್ಲಿ ಗಣೇಶನ ವಿಜಸರ್ಜನೆಗೆ ಸ್ಥಳ ಗುರುತಿಸಬೇಕು.ಕೆರೆ,ಕಲ್ಯಾಣಿಗಳಲ್ಲಿ ಅವಕಾಶ ಬೇ ಡ. ಇದಕ್ಕೆಂದೇ ಪ್ರತ್ಯೇಕ ಟ್ಯಾಂಕ್‌ಗಳನ್ನು ನಿರ್ಮಿಸಬೇಕು. ಹೂವು,ಹಣ್ಣು,ಬಾಳೆಕಂಬ,ಮಾವಿನೆಲೆ ಇತರೆ ಹಸಿ ತ್ಯಾಜ್ಯ ಸಂಗ್ರಹಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಟ್ಯಾಂಕರ್‌ಗಳಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ ನೀಡುವ ಕುರಿತು ಜಾಗೃತಿ ಮೂಡಿಸಬೇಕೆಂದು ಎಡಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಬಡಾವಣೆ ಠಾಣೆ ಪೊಲೀಸ್‌ಇನ್ಸ್‌ಪೆಕ್ಟರ್ ಟಿ.ಆರ್.ನಯಿಂಅಹಮದ್,ನಗರಸಭೆ ಪರಿಸರ ಇಂಜಿನಿಯರ್ ಜಾಫರ್ ಮತ್ತಿತರ ಅಧಿ ಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net