

ಬಳ್ಳಾರಿ : ಸಾರ್ವಜನಿಕರು ಪಿಒಪಿ ಮತ್ತು ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿದೆ, ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಕೋರಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.