ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ

Published on

ಸೋಮವಾರಪೇಟೆ: ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಸಾಂಕ್ರಾಮಿಕ ರೋಗಗಳಿಂದ ದೂರವಿರಬಹುದು ಎಂದು ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಅಧಿಕಾರಿ ಭೂಮಿಕಾ ಹೇಳಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗೌಡಳ್ಳಿ ವತಿಯಿಂದ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಂಭ್ರಮ ಕಾರ್ಯಕ್ರಮದಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಸಾಂಕ್ರಾಮಿಕ ರೋಗಗಳು ವಿಷಯ ಕುರಿತು ಉಪನ್ಯಾಸ ನೀಡಿದರು.


ಸಾಂಕ್ರಾಮಿಕ ರೋಗಗಳು ಒಬ್ಬರಿಂದ ಒಬ್ಬರಿಗೆ ಹರಡುತ್ತವೆ. ಗಾಳಿ, ನೀರು ಕಲುಷಿತ ಆಹಾರದಿಂದಲೂ ಹರಡುತ್ತವೆ. ರೋಗಲಕ್ಷಣಗಳು ಕಂಡುಬಂದ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಉಪ ಪ್ರಾಂಶುಪಾಲರಾದ ಬಸವರಾಜಪ್ಪ, ಆರ್‌ಕೆಎಸ್‌ಐ ಮಮತಾ ರೈ, ಆಪ್ತ ಸಮಲೋಚಕಿ ಸವಿತಾ, ಆಶಾ ಕಾರ್ಯಕರ್ತೆ ಸವಿತಾ, ಹಿರಿಯ ಶಿಕ್ಷಕರಾದ ಕೆ. ಮೂರ್ತಿ, ಕೆ.ವಿ. ಶಶಿಕಲಾ, ಎಸ್.ಹೇಮಲತಾ, ಕೆ.ಆರ್. ಧನ್ಯ, ಆರ್. ಶಶಿಧರ್, ಡಿ.ಎಸ್. ಮಧುಕುಮಾರ್, ಅಪೂರ್ವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net