ಪರಿಸರಕ್ಕೆ ಧಕ್ಕೆ ಮಾನವನ ಅವನತಿಗೆ ದಾರಿ

CTD 1 MURUGA--002
Published on

ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗ
ಮುರುಘಾಮಠ ಪರಿಸರ ರಕ್ಷಣೆ ನಿಟ್ಟಿನಲ್ಲಿ ಬಹಳ ವರ್ಷಗಳಿಂದ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ ಎಂದು ಮಠದ ಆಡಳಿತ ಮಂಡಳಿ ಸದಸ್ಯ ಡಾ. ಶ್ರೀ ಬಸವಕುಮಾರ ಸ್ವಾಮೀಜಿ ಹೇಳಿದರು.
ಮುರುಘಾಮಠ, ಎಸ್‌ಜೆಎಂ ವಿದ್ಯಾಪೀಠ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿರುವ ಸಸಿ ನೆಡುವ ಸಪ್ತಾಹದ 3ನೇ ದಿನ ಶನಿವಾರ ಗಾರೇಹಟ್ಟಿ ಬೃಹನ್ಮಠ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಕಾರ‌್ಯಕ್ರಮದಲ್ಲಿ ಮಾತನಾಡಿದರು.
ಪರಿಸರಕ್ಕೆ ಧಕ್ಕೆ ಎದುರಾದರೆ ಮಾನವನ ಅವನತಿ ಖಚಿತ. ಆದ್ದರಿಂದ ಸಸಿಗಳನ್ನು ನೆಟ್ಟು ಪೋಷಿಸುವ ಹೊಣೆಗಾರಿಕೆ ಪ್ರತಿಯೊಬ್ಬರೂ ವಹಿಸಿಕೊಳ್ಳಬೇಕು ಎಂದರು.
ನೇತೃತ್ವ ವಹಿಸಿದ್ದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಪರಿಸರ ಸಂರಕ್ಷಣೆ ಹೊಣೆ ಹೊರದಿದ್ದರೆ ಭವಿಷ್ಯದಲ್ಲಿ ಭಾರಿ ಪ್ರಮಾಣದ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪರಿಸರ ಜಾಗೃತಿ ಆಂದೋಲನದ ಸ್ವರೂಪ ಪಡೆದುಕೊಳ್ಳಬೇಕಿದೆ. ಶ್ರೀಮಠ ಕಾಲ, ಕಾಲ್ಕಕೆ ತ್ಕಕಂತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ ಎಂದರು.
ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ತಿಪ್ಪೇರುದ್ರ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಜಗದ್ಗುರು ಜಯವಿಭವ ಮುರುಘರಾಜೇಂದ್ರ ಕಲ್ಪವೃಕ್ಷ ವನದಲ್ಲೂ ಸಸಿಗಳನ್ನು ನೆಡಲಾಯಿತು.
ಮುಖ್ಯಶಿಕ್ಷಕರಾದ ಆಶಾರಾಣಿ, ಮಹಾಂತೇಶ್, ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಪಿಎಂಜೆ ರಾಜೇಶ್, ಬಸವರಾಜ ಕಟ್ಟಿ, ಎಂ.ಎಸ್.ಮೃತ್ಯುಂಜಯ, ಶಿವಯೋಗಿ, ಕುಮಾರ್ ಮತ್ತಿತರರು ಇದ್ದರು.
ಸಪ್ತಾಹದ ನಾಲ್ಕನೇ ದಿನದ ಸಸಿ ನೆಡುವ ಕಾರ‌್ಯಕ್ರಮ ಜೂ.2ರ ಬೆಳಗ್ಗೆ 8 ಗಂಟೆಗೆ ಸೀಬಾರದ ಎಸ್‌ಎನ್ ಸ್ಮಾರಕ ಹಾಗೂ ದನಗಳ ಜಾತ್ರಾ ಪ್ರದೇಶದಲ್ಲಿ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net