

ಅರಕಲಗೂಡು: ಮಕ್ಕಳು ಚಿಕ್ಕಂದಿನಿಂದಲೇ ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಕಿವಿಮಾತು ಹೇಳಿದರು.
ತಾಲೂಕಿನ ಮಲ್ಲಿಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಪಂ ವತಿಯಿಂದ ಸ್ವಚ್ಚಭಾರತ್ ಮಿಷನ್ ಯೋಜನೆಯಡಿ ಶನಿವಾರ ಆಯೋಜಿಸಿದ್ದ ಸ್ವಚ್ಚತಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿದ್ದರೆ ಆರೋಗ್ಯಕರ ಜೀವನಕ್ಕೆ ಸಹಕಾರಿಯಾಗಲಿದೆ. ಹೀಗಾಗಿ ಎಲ್ಲರೂ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಬೇಕು. ಮಕ್ಕಳು ಶಾಲಾ ಆವರಣದಲ್ಲಿ ಎಲ್ಲೆಂದರಲ್ಲಿ ಕಸ ಬೀಸಾಡದೆ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ತಮ್ಮ ಮನೆ ಮಂದಿಗೆಲ್ಲ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಖ್ಯ ಶಿಕ್ಷಕಿ ಸುನಂದ, ಗ್ರಾಪಂ ಲೆಕ್ಕಾಧಿಕಾರಿ ರಂಗಸ್ವಾಮಿ, ಹರೀಶ್, ಧರ್ವ್ಮಯ್ಯ, ಸಹ ಶಿಕ್ಷಕರು, ಸಿಬ್ಬಂದಿ ಇದ್ದರು. ಸ್ವಚ್ಚತೆ ಕುರಿತು ಶಾಲಾ ಮಕ್ಕಳಿಂದ ಪ್ರತಿಜ್ಙಾ ವಿಧಿ ಬೋಧಿಸಲಾಯಿತು. ಶಾಲಾ ಮೈದಾನದ ಸುತ್ತ ಶ್ರಮದಾನ ನಡೆಸಲಾಯಿತು.