ಪರಿಹಾರದ ಮೇಲಿನ ಬಡ್ಡಿಯ ಹಣ ಸರ್ಕಾರಕ್ಕೆ ಬಿಟ್ಟುಕೊಟ್ಟ ಸಂತ್ರಸ್ತರು

bkt-8-3
ಬಾಗಲಕೋಟೆ ನಗರದ ಜಿಲ್ಲಾ ನ್ಯಾಯಲಯ ಸಂಕೀರರ್ಣದ ಪ್ರಧಾನ ಹಿರಿಯ ದಿವಾನಿ ನ್ಯಾಯಾಲಯದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯ ನೇರಳೆ ಅವರ ನೇತೃತ್ವದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್.
Published on

ಬಾಗಲಕೋಟೆ: ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಭೂಸ್ವಾದೀನಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ದೊರೆಯಬೇಕಾದ ಪರಿಹಾರಧನದ ಮೇಲಿನ ಒಂದು ವರ್ಷದ ಬಡ್ಡಿಯ ಹಣವನ್ನು ಸರ್ಕಾರಕ್ಕೆ ಬಿಟ್ಟುಕೊಡುವ ಕಾರ್ಯ ಮಾಡಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯ ನೇರಳೆ ಅವರ ನೇತೃತ್ವದಲ್ಲಿ ಜಿಲ್ಲಾ ನ್ಯಾಯಲಯ ಸಂಕೀರರ್ಣದ ಪ್ರಧಾನ ಹಿರಿಯ ದಿವಾನಿ ನ್ಯಾಯಾಲಯದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಭೂಮಿಯನ್ನು ಕಳೆದುಕೊಂಡ ಸಂತ್ರಸ್ತರು ಪರಿಹಾರ ಧನದಲ್ಲಿ ಬರುವ ಬಡ್ಡಿಯ ಹಣವನ್ನು ಸರ್ಕಾರಕ್ಕೆ ಬಿಟ್ಟು ಕೊಡುವ ಕಾರ್ಯ ನಡೆಯಿತು. ಅಲ್ಲದೇ ೮೦ ರಷ್ಟು ಸಂತ್ರಸ್ತರು ಸಹ ಪರಿಹಾರಧನದಲ್ಲಿ ಶೇ.೧೦ ರಷ್ಟು ಹಣವನ್ನು ಸರ್ಕಾರಕ್ಕೆ ಬಿಟ್ಟು ಕೊಡುವ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದರು.

ಕಳೆದ ೩೦ ವರ್ಷಗಳಲ್ಲಿ ಬಗೆಹರಿಯದ ಸಿವಿಲ್ ಪ್ರಕರಣವನ್ನು ಸಹ ಇತ್ಯರ್ಥ ಪಡಿಸಲಾಯಿತು. ಕುಟುಂಬ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ ಎರಡು ಜೋಡಿಗಳನ್ನು ವಿಚ್ಛೇದನ ಪ್ರಕರಣವನ್ನು ಹಿಂದೆ ತೆಗೆದುಕೊಳ್ಳುವಂತೆ ಮಾಡಿ ಪುನಃ ಒಂದು ಮಾಡಲಾಯಿತು. ರಾಷ್ಟ್ರೀಯ ಲೋಕ ಅದಾಲತ್ ಶಿಬಿರದಲ್ಲಿ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಚಾರಣೆಗಾಗಿ ತೆಗೆದುಕೊಳ್ಳಲಾಗಿದ್ದು, ಅವುಗಳನ್ನು ಇತ್ಯರ್ಥ ಪಡಿಸಿ ರಾಜೀ ಸಂಧಾನ ಮಾಡಲಾಯಿತು.

ಬಾಗಲಕೋಟೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೀಳಗಿ, ಮುಧೋಳ, ಬನಹಟ್ಟಿ, ಹುನಗುಂದ, ಜಮಖಂಡಿ, ಬಾದಾಮಿ ನ್ಯಾಯಾಲಯಗಳಲ್ಲಿ ಸಹ ಬಾಕಿ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ಇತ್ಯರ್ಥ ಪಡಿಸಲಾಯಿತು.

ಶಿಬಿರದಲ್ಲಿ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಜಿ.ಎ.ಕಟ್ಟಿಮನಿ, ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾದೀಶ ಕೃಷ್ಣಮೂರ್ತಿ ಪಡಸಲಗಿ, ಪ್ರಧಾನ ಹಿರಿಯ ನ್ಯಾಯಾಧೀಶೆ ಪಲ್ಲವಿ ಆರ್, ೧ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶೆ ಹೇಮಾ ಪಸ್ತಾಪುರ, ೨ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಮಹೇಶ ಪಾಟೀಲ, ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಮುರುಗೇಂದ್ರ ತುಬಾಕೆ, ಯುಕೆಪಿಯ ವಿಶೇಷ ಜಿಲ್ಲಾಽಕಾರಿ ಸೋಮಲಿಂಗ ಗೆನ್ನೂರ ಸೇರಿದಂತೆ ಕಕ್ಷಿದಾರರು ವಕೀಲರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net