ಪರೀಕ್ಷಾ ಕೇಂದ್ರಗಳ ಸುತ್ತ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Exam
Published on

ಹಾಸನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ-150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜಿಲ್ಲಾ ವ್ಯಾಪ್ತಿಯ 30 ಪರೀಕ್ಷಾ ಕೇಂದ್ರಗಳಲ್ಲಿ ಡಿ.8ರ ಭಾನುವಾರ ಪರೀಕ್ಷೆ ನಡೆಯಲಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 163 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸದರಿ ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಅವರು ಆದೇಶಿಸಿದ್ದಾರೆ.

ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ನಿರ್ಬಂಧಿಸಿ ಈ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net