

ವಿರಾಜಪೇಟೆ: ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪಾಲಕರು, ಅಧ್ಯಾಪಕರ ಸಭೆಯನ್ನು ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಪಾತ್ರ ಮಹತ್ತರವಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಹೆಚ್ಚಿನ ಸಮಯವನ್ನು ಓದಿಗೆ ಮೀಸಲಿಡಬೇಕು. ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕು ಎಂದು ಹೇಳಿದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ.ದಮಯಂತಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
2025-26 ನೇ ಶೈಕ್ಷಣಿಕ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪಾಲಕ-ಅಧ್ಯಾಪಕ ಸಂಘದ ಉಪಾಧ್ಯಕ್ಷರಾಗಿ ಕೃಪಾ ಚಂಗಪ್ಪ, ಸದಸ್ಯರಾಗಿ ಎಚ್.ಎನ್.ಶೋಭಾ, ಪ್ರವೀಣ್ ಆಯ್ಕೆಯಾದರು. ಉಪನ್ಯಾಸಕರಾದ ಎಂ.ಬಿ.ದೇಚಮ್ಮ, ಗಾಯತ್ರಿ, ಡಯಾನ, ನಕ್ಯಾ ಬಾನು, ಅನುಪಮಾ ತಿಮ್ಮಯ್ಯ, ದಿವ್ಯಾ, ಕುಶಾಲಪ್ಪ, ಪಾಲಕರು, ಸಿಬ್ಬಂದಿ ಉಪಸ್ಥಿತರಿದ್ದರು.