

ಕೊಪ್ಪಳ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಉಚಿತ ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ತಿಳಿಸಿದ್ದಾರೆ.
ಸ್ಟಡಿ ಸರ್ಕಲ್ ಯೋಜನೆಯಡಿ ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕೆಇಎಯಿಂದ ಅಧಿಸೂಚಿಸಲ್ಪಟ್ಟಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಜುಲೈ 26ರಿಂದ ಆಗಸ್ಟ್ 6ವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತು ಪಡಿಸಿ) ಆಯೋಜಿಸಲಾಗಿದೆ. ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮೊದಲನೇ ಮಹಡಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಕೊಪ್ಪಳ ದೂ.ಸಂ:08539-220859, 9353515518ಗೆ ಸಂಪರ್ಕಿಸಲು ತಿಳಿಸಿದ್ದಾರೆ.