

ಹುಬ್ಬಳ್ಳಿ: ಗುರುವಾರ ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 114 ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಪದವಿಪೂರ್ವ ಶಿಕ್ಷಣ ಇಲಾಖೆ ಕೋರಿಕೆಯಂತೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ.
ಎಲ್ಲ ಬಸ್ಗಳನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗಿದೆ. ಸೋಡಿಯಂ ಹೈಪೋಕೊ್ಲೕರೈಡ್ ದ್ರಾವಣ ಸಿಂಪಡಿಸಿ ಸ್ಯಾನಿಟೈಸೇಷನ್ ಮಾಡಲಾಗಿದೆ. ವಿವಿಧ ಊರುಗಳಿಂದ ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಿಗೆ ಮಾರ್ಗ ನಕ್ಷೆ ರೂಪಿಸಲಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಅವಶ್ಯವಿರುವ ಬಸ್ಗಳನ್ನು ನಿಯೋಜನೆ ಮಾಡಲಾಗಿದೆ. ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತೆ ಕ್ರಮಗಳ ಪಾಲನೆ ಬಗ್ಗೆ ಚಾಲಕರು, ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ. ಬಸ್ಗಳ ಸುಗಮ ಕಾರ್ಯುಚರಣೆ ಮೇಲ್ವಿಚಾರಣೆಗಾಗಿ ಸಾರಿಗೆ ಸಂಸ್ಥೆಯಿಂದ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ರಾಮನಗೌಡರ್ ತಿಳಿಸಿದ್ದಾರೆ.
ಎಲ್ಲೆಲ್ಲಿ ಎಷ್ಟೆಷ್ಟು ಬಸ್: ಜಿಲ್ಲೆಯ ಕಲಘಟಗಿ -35, ಕುಂದಗೋಳ- 34, ನವಲಗುಂದ- 15, ಅಣ್ಣಿಗೇರಿ ತಾಲೂಕಿನಲ್ಲಿ 30 ಬಸ್ಗಳನ್ನು ನಿಯೋಜಿಸಲಾಗಿದೆ.