ಪರೀಕ್ಷೆ ನಡೆಸುವ ನಿರ್ಧಾರ ಸ್ವಾಗತಾರ್ಹ - ಡಾ.ಪ್ರಭಾಕರ ಕೋರೆ

2525
Published on


ಬೆಳಗಾವಿ: ಮಕ್ಕಳ ಶಿಕ್ಷಣ ಭವಿಷ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದು ಅಗತ್ಯವಾಗಿದ್ದು, ಸರ್ಕಾರವು ಕೈಗೊಂಡ ಕ್ರಮ ಸ್ವಾಗತಾರ್ಹವಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.

ಕೆಎಲ್‌ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಆನಂದ ಬಿ.ಪುಂಡಲೀಕ ಅವರಿಗೆ ಹತ್ತು ಸಾವಿರ ಮಾಸ್ಕ್ ಹಸ್ತಾಂತರಿಸಿದ ಬಳಿಕ ಅವರು ಮಾತನಾಡಿದರು.

ಶಿಕ್ಷಣ ಇಲಾಖೆಯು ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಎಲ್ಲ ರೀತಿಯ ಪೂರ್ವಸಿದ್ಧತೆ ಮಾಡಿಕೊಂಡಿದೆ. ಕರೊನಾ ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಯ, ಆತಂಕ ತೊರೆದು ಎರಡು ದಿನಗಳ ಪರೀಕ್ಷೆ ಎದುರಿಸಬೇಕು. ಪರೀಕ್ಷೆಯ ದಿನಗಳು ಹತ್ತಿರವಾಗುತ್ತಿದ್ದು ಎಲ್ಲ ವಿದ್ಯಾರ್ಥಿಗಳು ಓದಿನೆಡೆಗೆ ಹೆಚ್ಚಿನ ಗಮನ ಹರಿಸಬೇಕು.

ಅವರ ಆರೋಗ್ಯದ ಹಿತದೃಷ್ಟಿಯಿಂದ ಕೆಎಲ್‌ಇ ಸಂಸ್ಥೆಯು ಹತ್ತು ಸಾವಿರ ಮಾಸ್ ವಿತರಿಸುತ್ತಿದೆ ಎಂದು ಹೇಳಿದರು. ಕೆಎಲ್‌ಇ ಸಂಸ್ಥೆಯ ಕಾರ್ಯದರ್ಶಿ ಡಾ.ಬಿ.ಜಿ.ದೇಸಾಯಿ, ಆಜೀವ ಸದಸ್ಯ ಮಹಾದೇವ ಬಳಿಗಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net