ಪರೀಕ್ಷೆ ಬರೆದ 9 ಪ್ರೌಢಶಾಲೆಗಳ 422 ವಿದ್ಯಾರ್ಥಿಗಳು

21sunti01..
Published on

ಸುಂಟಿಕೊಪ್ಪ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಿದ್ದು, ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ ಹಾಗೂ ಸಂತಮೇರಿ 2 ಪರೀಕ್ಷಾ ಕೇಂದ್ರಗಳಲ್ಲಿ 9 ಪ್ರೌಢಶಾಲೆಗಳ 422 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆ, ನಿರ್ಮಲ ವಿದ್ಯಾಭವನ ಹಟ್ಟಿಹೊಳೆ, ಸರ್ಕಾರಿ ಪ್ರೌಢಶಾಲೆ ಮಾದಾಪುರ, ಚೆನ್ನಮ್ಮ ಪ್ರೌಢಶಾಲೆ ಗರಗಂದೂರು, ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಂಟಿಕೊಪ್ಪ, ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ, ಕಾನ್‌ಬೈಲ್ ಸರ್ಕಾರಿ ಪ್ರೌಢಶಾಲೆ, ಶಾಂತಿನಿಕೇತನ, ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ, ಒಟ್ಟು 422 ವಿದ್ಯಾರ್ಥಿಗಳು ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ 172 ಮಕ್ಕಳಲ್ಲಿ 172 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದರೆ, ಸಂತ ಮೇರಿ ಆಂಗ್ಲ ಮಾಧ್ಯಮ ಪರೀಕ್ಷಾ ಕೇಂದ್ರದಲ್ಲಿ 250 ವಿದ್ಯಾರ್ಥಿಗಳ ಪೈಕಿ ಒಬ್ಬ ವಿದ್ಯಾರ್ಥಿ ಗೈರಾಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 100 ಮೀಟರ್ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್ ಪಹರೆ ಹಾಗೂ ಆರೋಗ್ಯ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net