ಪಳ್ಳಿಯಬ್ಬ ಕೊಲೆ ಪ್ರಕರಣ : ಐವರು ಆರೋಪಿಗಳು ದೋಷಿ

udp-judgment
Published on

///*ಪ್ರಕರಣದ ವಿವರ: ಪಾವೂರು ಗ್ರಾಮದ ಮಲಾರ್ನ ಪಳ್ಳಿಯಬ್ಬ ಯಾನೆ ಪಳ್ಳಿಯಾಕ (75)ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಇವರನ್ನು ದುಷ್ಕರ್ಮಿಗಳು ಅತ್ಯಂತ ವ್ಯವಸ್ಥಿತವಾಗಿ ಹತ್ಯೆಗೈದು ಹೂತು ಹಾ ಕಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು. ಈ ಬಗ್ಗೆ ಕೊಣಾಜೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದ್ದರು.ಮಲಾರ್ ಅಕ್ಷರ ನಗರ ನಿವಾಸಿಗಳಾದ ಹಂಝ (44), ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಅಥಾವುಲ್ಲ ಯಾನೆ ಅಲ್ತಾಫ್ ಅವರ ಮೇಲಿನ ಆರೋಪವು ಸಾಬೀತಾಗಿದೆ.ಮಂಗಳೂರು: ಪಾವೂರು ಗ್ರಾಮದ ಮಲಾರ್ ಅರಸ್ತಾನದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದ ಐವರ ಮೇಲಿನ ಆರೋಪವು ಸಾಬೀತಾಗಿದೆ. ಐವರು ಆರೋಪಿಗಳು ಕೂಡ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಬಸಪ್ಪಬಾಳಪ್ಪ ಜಕಾತಿ ಅವರು ಶಿಕ್ಷೆಯ ಪ್ರಮಾಣವನ್ನು ಮಾ.3ರಂದು ನೀಡುವುದಾಗಿ ಪ್ರಕಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net