ಪಹಲ್ಗಾಮ್ ಘಟನೆ ಖಂಡಿಸಿ ಮುಸ್ಲಿಮ್ ಸಮುದಾಯದ ಪ್ರತಿಭಟನೆ

28 ckm 11
ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯ‌ನ್ನು ಖಂಡಿಸಿ ಮುಸ್ಲಿಂ ಜಾಯಿಂಟ್ ಆಕ್ಷನ್ ಕಮಿಟಿ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದವರು ನಗರದ ತಾಲೂಕು ಕಚೇರಿಯಿಂದ ಅಜಾದ್ ಪಾರ್ಕ್ ವೃತ್ತದ ವರೆಗೆ ಲೈಟ್ ಮಾರ್ಚ್ ನಡೆಸಿ ಭಯೋತ್ಪಾದಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Published on

ಚಿಕ್ಕಮಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯ‌ನ್ನು ಖಂಡಿಸಿ ಮುಸ್ಲಿಂ ಜಾಯಿಂಟ್ ಆಕ್ಷನ್ ಕಮಿಟಿ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದವರು ನಗರದ ತಾಲೂಕು ಕಚೇರಿಯಿಂದ ಅಜಾದ್ ಪಾರ್ಕ್ ವೃತ್ತದ ವರೆಗೆ ಲೈಟ್ ಮಾರ್ಚ್ ನಡೆಸಿ ಭಯೋತ್ಪಾದಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಲೈಟ್ ಮಾರ್ಚ್ ನಲ್ಲಿ ಭಾಗವಹಿಸಿದ್ದ ಒಂದು ಸಾವಿರಕ್ಕೂ ಅಧಿಕ ಮುಸ್ಲಿಂ ಸಮುದಾಯದವರು ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಅವಕಾಶ ನೀಡಬಾರದು. ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ಭಯೋತ್ಪಾದಕರಿಗೆ ಸಹಾಯ ಮಾಡುವವರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಇಸ್ಲಾಂ ಶಾಂತಿಯನ್ನು ಕಲಿಸುತ್ತದೆಯೇ ಹೊರತು ಹಿಂಸೆಯನ್ನಲ್ಲ. ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಮುಸ್ಲಿಂ ಸಮುದಾಯ ಎಂದೆಂದಿಗೂ ಭಯೋತ್ಪಾದನೆಯನ್ನು ಖಂಡಿಸುತ್ತದೆ. ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ನ್ಯಾಯ ಕೊಡಿಸಬೇಕು. ಈ ಹಿನ್ನೆಲೆಯಲ್ಲಿ ಭಯೋತ್ಪಾದಕರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಮಹಮ್ಮದ್ ರಜ್ವಿ, ನಗರಸಭೆ‌ ಸದಸ್ಯ ಮುನೀರ್‌ ಅಹ್ಮದ್‌, ಸಲಹಾ ಸಮಿತಿ ಸದಸ್ಯ ಅನ್ಸರ್‌ ಅಲಿ, ಸಿ.ಎನ್‌.ಅಕ್ಮಲ್, ಇರ್ಷಾದ್ ಅಹಮದ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net