ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆ ಖಂಡಿಸಿ ರೈತ ಸಂಘ ಪ್ರತಿಭಟನೆ

28 ckm 7
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ರೈತ ಸಂಘದ ಕಾರ್ಯಕರ್ತರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಧಾರಣ ಹತ್ಯಾಕಾಂಡವನ್ನು ಖಂಡಿಸಿದರು. ಡಿ.ಮಹೇಶ್, ಪರ್ವತೇಗೌಡ, ದಯಾನಂದ್, ಪುಟ್ಟಸ್ವಾಮೇಗೌಡ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಧಾರಣ ಹತ್ಯಾಕಾಂಡವನ್ನು ಖಂಡಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಸೋಮವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್ ಹೇಮಂತ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯ ಈ ಘಟನೆಯಲ್ಲಿ ಎದ್ದುಕಾಣುತ್ತಿದೆ. ಇದರಲ್ಲಿ ಸುಮಾರು ೨೬ ಜನ ಅಮಾಯಕ ಪ್ರವಾಸಿಗರು ಹತ್ಯೆಗೀಡಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ತುಂಬಾ ಸೂಕ್ಷö್ಮ ಪ್ರದೇಶವಾಗಿದ್ದರಿಂದ ಸೂಕ್ತ ಭದ್ರತೆ ಒದಗಿಸದಿರುವುದು ದುಃಖಕರ ಸಂಗತಿಯಾಗಿದೆ. ಘಟನೆ ನಡೆದ ತಕ್ಷಣ ಕೇಂದ್ರ ಸರ್ಕಾರ ಪಾಕಿಸ್ತಾನ ಬೆಂಬಲಿತ ಉಗ್ರರನ್ನು ಬೇಟೆಯಾಡಲು ಪಣ ತೊಟ್ಟಿರುವ ಮೋದಿಯವರ ಕ್ರಮ ಶ್ಲಾಘನೀಯ ಎಂದರು.

ಈ ಘಟನೆಗೆ ಕಾರಣರಾಗಿರುವ ಉಗ್ರರನ್ನು ಪತ್ತೆಹಚ್ಚಿ ನೇರ ಶಿಕ್ಷೆ ವಿಧಿಸಬೇಕು. ಭಾರತವನ್ನು ಪದೇ ಪದೇ ಕೆಣಕಿ ಮುಖಭಂಗ ಅನುಭವಿಸುತ್ತಿರುವ ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಿ ಉಗ್ರರ ನೆಲೆಯನ್ನು ನಿರ್ಣಾಮ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೬ ಅಮಾಯಕ ಪ್ರವಾಸಿಗರ ಸಾವಿನ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ದೇಶದ ಭದ್ರತೆಗೆ ಧೆಕ್ಕೆಯುಂಟುಮಾಡಿದೆ. ಕೂಡಲೇ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಹೇಶ್.ಡಿ, ಗೌರವಾಧ್ಯಕ್ಷ ಎಂ.ಸಿ. ಬಸವರಾಜು, ಜಿಲ್ಲಾ ಕಾರ್ಯಾಧ್ಯಕ್ಷ ದಯಾನಂದ್, ಪ್ರಮುಖರಾದ ಪುಟ್ಟಸ್ವಾಮೇಗೌಡ, ರಮೇಶ್, ಶಿವಕುಮಾರ್, ಉಮೇಶ್, ಪರ್ವತೇಗೌಡ, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net