

ಚಿತ್ರದುರ್ಗ: ನಗರದ ಡಯಟ್‌ನಲ್ಲಿ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿ ಶನಿವಾರ ನಡೆದ ಜಿಲ್ಲಾಮಟ್ಟದ ಪಾತ್ರಾಭಿನಯ ಸ್ಪರ್ಧೆಯಲ್ಲಿ ಹೊಸದುರ್ಗ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಎನ್‌ಪಿಇಪಿ ಜಿಲ್ಲಾ ನೋಡಲ್ ಅಧಿಕಾರಿ ಎಸ್.ಬಸವರಾಜು, ಉಪನ್ಯಾಸಕರಾದ ನಿತ್ಯಾನಂದ, ಎನ್.ರಾಘವೇಂದ್ರ, ಸಿದ್ದೇಶಿ, ಮಂಜುನಾಥ್, ಮಾರ್ಗದರ್ಶಿ ಶಿಕ್ಷಕ ಶಿವಶಂಕರ್ ಇತರರಿದ್ದರು.