

ಚಿತ್ರದುರ್ಗ: ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಕಾನೂನಿನ ತಿಳಿವಳಿಕೆ ಅಗತ್ಯವಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಪರಾಜು ಹೇಳಿ ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಕೀಲರ ಸಂಘ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಗರದ ಡಿ.ದೇವ ರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬುಧವಾರ ಆಯೋಜಿಸಿದ್ದ ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಕಾನೂನು ಅರಿವು-ನೆರವು ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,ಪಾಲಕರ ಕನಸುಗಳನ್ನು ನನಸು ಮಾಡುವ ಜವಾಬ್ದಾರಿ ಮಕ್ಕಳ ಮೇಲೆ ಇರುತ್ತದೆ.
ಮಕ್ಕಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆಯನ್ನು ಅನುಷ್ಠಾನ ಗೊಳಿಸಲಾಗಿದೆ. ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಭವಿಷ್ಯ ಹಾಳಾಗುತ್ತದೆ ಹಾಗೂ ಮಾನಸಿಕವಾಗಿಯೂ ಮಕ್ಕಳು ಕುಗ್ಗುತ್ತಾರೆ. ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು ಸಾಕ್ಷಿ ಹೇಳುವ ಧೈರ್ಯ ತೋರಬೇಕೆಂದರು.
ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ,ಲೈಂಗಿಕ ದೌರ್ಜನ್ಯವೆಸಗುವ ಸಮಾಜ ಘಾತುಕರೆ ಎಚ್ಚರ ವಹಿಸಬೇಕು ವಿದ್ಯಾ ಭ್ಯಾಸ ಮಾಡಿದ ಶಾಲೆ ಹಾಗೂ ಪಾಲಕರಿಗೆ ಮಕ್ಕಳು ಕೀರ್ತಿ ತರಬೇಕೆಂದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್.ಪ್ರಭಾಕರ್ ಮಾ ತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಶಾಂತಮ್ಮ,ವಕೀಲರ ಸಂಘದ ಪ್ರಧಾನ ಕಾರ‌್ಯದರ್ಶಿ ಆರ್.ಗಂಗಾಧರ್ ಮತ್ತಿತರರು ಇದ್ದರು.