ಪಾಲಕರಿಗೆ ಶಿಕ್ಷಣದ ಮಹತ್ವ ತಿಳಿಸಿ

23ydg04
Published on

ಯಾದಗಿರಿ: ಅಪಾಯಕಾರಿ ಉದ್ಯಮಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದರೆ, ತಕ್ಷಣ ಅಂಥವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಹಸೀಲ್ದಾರ್ ಸುರೇಶ ಅಂಕಲಗಿ ಸೂಚಿಸಿದರು.

ಶನಿವಾರ ಇಲ್ಲಿನ ತಹಸೀಲ್ ಕಚೇರಿಯಲ್ಲಿ ಕರೆದಿದ್ದ ತಾಲೂಕು ಮಟ್ಟದ ಬಾಲಕಾಮರ್ಿಕ ಹಾಗೂ ಪುನರ್ವಸತಿ ಸಮಿತಿ ಸಭೆಯಲ್ಲಿ ಮಾತನಾಡಿ, ಕಲಂ 16 ಮತ್ತು 17ರಡಿಯಲ್ಲಿ ಬರುವ ಎಲ್ಲ ತಾಲೂಕು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳು ವಿವಿಧೆಡೆ ದಿಢೀರ್ ದಾಳಿ ನಡೆಸಿ ಬಾಲಕಾಮರ್ಿಕ ಮಕ್ಕಳ ಬಗ್ಗೆ ವಿವರ ಸಲ್ಲಿಸಬೇಕು. ಪಾಲಕರಿಗೆ ಶಿಕ್ಷಣದ ಮಹತ್ವ ತಿಳಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದರು.

ಬಾಲ ಕಾಮರ್ಿಕ ಪದ್ಧತಿ ನಿಷೇಧ ಕುರಿತು ತಿಂಗಳಿಗೆ 2 ಬಾರಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಆಗಾಗ ಅಂಗಡಿಗಳು,ಹೋಟೆಲ್,ಗ್ಯಾರೇಜ್,ಬಾರ್,ರೆಸ್ಟೋರೆಂಟ್ ಹೀಗೆ ಎಲ್ಲ ಉದ್ಯಮಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುವಂತೆ ನಿದರ್ೇಶನ ನೀಡಿದರು.

ಜಿಲ್ಲಾ ಬಾಲಕಾಮರ್ಿಕ ನಿಮರ್ೂಲನಾ ಯೋಜನಾ ಸೊಸೈಟಿ ಪಿಡಿ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಈ ಅನಿಷ್ಠ ಪದ್ಧತಿ ವಿರುದ್ಧ ನಿರಂತರ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net