ಪಾಲಿಕೆಯಲ್ಲಿ ಹಿರಿಯ ನಾಗರಿಕರಿಗೆ ಹೆಲ್ಪ್ ಡೆಸ್ಕ್- ಮೇಯರ್ ಸುಧೀರ್ ಶೆಟ್ಟಿ ಘೋಷಣೆ

mng- oct 1- senior citizen
ಮಂಗಳೂರು ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಭಾನುವಾರ ನಡೆದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಪ್ರೊ.ಜಿ.ಆರ್. ರೈ, ಪ್ರಕಾಶ್ ಕದ್ರಿ, ಜಗದೀಶ ಸೇಮಿತ, ಲೀಲಾ ಉಪಾಧ್ಯಾಯ, ಭಗಿನಿ ಜೆರೋಸಿಟಾ ಡಿಸೋಜ ಅವರನ್ನು ಈ ವೇಳೆ ಸನ್ಮಾನಿಸಲಾಯಿತು. ಹಿರಿಯ ನಾಗರಿಕರಿಗೆ ಏರ್ಪಡಿಸಿದ್ದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
Published on

ಮಂಗಳೂರು: ಹಿರಿಯ ನಾಗರಿಕರಿಗೆ ಸರ್ಕಾರ ನೀಡಿರುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹಿರಿಯ ನಾಗರಿಕರಿಗೆ ಹೆಲ್ಪ್ ಡೆಸ್ಕ್ ಆರಂಭಿಸಲಾಗುವುದು. ಎಲ್ಲ ಇಲಾಖೆಗಳಲ್ಲಿ ಇಂತಹ ಹೆಲ್ಪ್ ಡೆಸ್ಕ್ ತೆರೆಯುವ ಆವಶ್ಯಕತೆ ಇದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಭಾನುವಾರ ನಡೆದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಉದ್ಘಾಟನೆ ನಿರ್ವಹಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು, ಅನುಭವಕ್ಕಿಂತ ದೊಡ್ಡ ಗುರುವಿಲ್ಲ. ಅನುಭವದ ಆಧಾರದ ಮೇಲೆ ಜೀವನ ಪಕ್ವಗೊಂಡ ಹಿರಿಯರು ಸಮಾಜಕ್ಕೆ ಸದಾ ಆದರ್ಶಪ್ರಾಯರು. ಭಾರತದ ಕುಟುಂಬ ಪದ್ಧತಿಯಲ್ಲಿ ಹಿರಿಯರಿಗೆ ಮಹತ್ವದ ಸ್ಥಾನವಿದೆ. ಈ ಪರಂಪರೆಯನ್ನು ಇಂದಿನ ಯುವಪೀಳಿಗೆ ಮುಂದುವರಿಸಬೇಕು ಎಂದು ಹೇಳಿದರು.


ಹಿರಿಯ ನಾಗರಿಕರ ಮನಸ್ಸಿನ ಭಾವನೆಗಳನ್ನು ಎಲ್ಲರೂ ಗೌರವಿಸಬೇಕು. ಹಿರಿಯ ನಾಗರಿಕರನ್ನು ಪ್ರೀತಿಯಿಂದ ಮಾತನಾಡಿಸಿ, ಸಮಾಜ ಅವರಿಗೆ ಗೌರವ ನೀಡಬೇಕು ಎಂದು ಅವರು ತಿಳಿಸಿದರು.


ವಿವಿಧ ಕ್ಷೇತ್ರದ ಸಾಧಕರಾದ ಪ್ರೊ.ಜಿ.ಆರ್. ರೈ, ಪ್ರಕಾಶ್ ಕದ್ರಿ, ಜಗದೀಶ ಸೇಮಿತ, ಲೀಲಾ ಉಪಾಧ್ಯಾಯ, ಭಗಿನಿ ಜೆರೋಸಿಟಾ ಡಿಸೋಜ ಅವರನ್ನು ಈ ವೇಳೆ ಸನ್ಮಾನಿಸಲಾಯಿತು. ಹಿರಿಯ ನಾಗರಿಕರಿಗೆ ಏರ್ಪಡಿಸಿದ್ದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕುಮಾರ್ ಮಳವಳ್ಳಿ, ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷೆ ತೆರೇಸಾ, ಆರೋಗ್ಯ ಇಲಾಖೆಯ ಡಾ. ಸಭಾ ಉಪಸ್ಥಿತರಿದ್ದರು. ಅಂಗವಿಕಲರ ಜಿಲ್ಲಾ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net