ಕಾರವಾರ: ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಪಂ ವ್ಯಾಪ್ತಿಯ ಕಡಸಲಗದ್ದೆಯ
ಪಾಳು ಬಿದ್ದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 900 ಚೀಲ ಪಡಿತರ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ವಿವಿಧೆಡೆ ಜನರಿಂದ ಪಡೆದು, ಹಳೆಯ ಗೇರು ಬೀಜ ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.
ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.