ಪಾಸ್ವಾನ್ ನಿಧನಕ್ಕೆ ಶೋಕ

h8-Paswan
Published on

ಹುಬ್ಬಳ್ಳಿ: ಕೇಂದ್ರ ಆಹಾರ, ನಾಗರಿಕ ಪೂರೈಕೆ ಸಚಿವ ರಾಮ್ ವಿಲಾಸ ಪಾಸ್ವಾನ್ ನಿಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅನೇಕ ಸಂದರ್ಭದಲ್ಲಿ ಮಾರ್ಗದರ್ಶನ ಮಾಡಿದ್ದ ಹಿರಿಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಅವರು ಶೋಕಿಸಿದ್ದಾರೆ. ಅಗಲಿದ ಆತ್ಮಕ್ಕೆ ಶಾಂತಿ ದೊರೆಯಲಿ, ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ನನ್ನ ಕೋರಿಕೆಯ ಮೇರೆಗೆ ಉತ್ತರ ಕರ್ನಾಟಕದ ಜನತೆಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಗೆ ಬಿಐಎಸ್ (ಬ್ಯೂರೊ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಕಚೇರಿ ಮಂಜೂರು ಮಾಡಿದ್ದರು. ಸ್ವತಃ ಆಗಮಿಸಿ ಉದ್ಘಾಟನೆ ನೆರವೇರಿಸಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.

ಶೆಟ್ಟರ್ ಸಂತಾಪ: 5 ದಶಕದಿಂದ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಪರಿಶಿಷ್ಟ ಸಮುದಾಯಗಳ ಸಮರ್ಥ ನಾಯಕ ರಾಮ್​ಲಾಸ ಪಾಸ್ವಾನ್ ನಿಧನದಿಂದ ಅಪಾರ ಹಾನಿಯಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಶೋಕ ವ್ಯಕ್ತಪಡಿಸಿದ್ದಾರೆ.

ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಇತರರು ಸಹ ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net