ಪಿಂಚಣಿ ವ್ಯವಸ್ಥೆ ಯಥಾವತ್ ಮುಂದುವರಿಸಲು ಪಿಂಚಣಿದಾರರ ಪ್ರತಿಭಟನೆ

mysore
Published on

ಮೈಸೂರು: ಪಿಂಚಣಿ ವ್ಯವಸ್ಥೆಯನ್ನು ಯಥಾವತ್ ಮುಂದುವರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ವಿಶ್ರಾಂತ ಉದ್ಯೋಗಿಗಳ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಿದ್ಧಾರ್ಥನಗರದಲ್ಲಿರುವ ಶಿಕ್ಷಕರ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಿದ ಪ್ರತಿಭಟನಾಕಾರರು, ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಮುಂದಿನ 8ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಸಾಧ್ಯವಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ. ಇದರಿಂದ ನಿವೃತ್ತರಾದ ಸರ್ಕಾರಿ ನೌಕರರಿಗೂ, ಕುಟುಂಬ ಪಿಂಚಣಿದಾರರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಈಗಾಗಲೇ 2006ರ ನಂತರ ಕೆಲಸಕ್ಕೆ ಸೇರಿದ ಸರ್ಕಾರಿ ನೌಕರರಿಗೆ ಪಿಂಚಣಿಯಿಂದ ವಂಚಿತರಾಗುವಂತೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ನಿವೃತ್ತರಿಗೂ ಪಿಂಚಣಿ ಸೌಲಭ್ಯ ಕೈ ತಪ್ಪುವ ಸಾಧ್ಯತೆ ಇದೆ. ಆದ್ದರಿಂದ ಪಿಂಚಣಿ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಅದನ್ನು ಯಥಾವತ್ ಉಳಿಸಿಕೊಂಡು ಹೋಗಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಮುಖಂಡರಾದ ಬಿ.ಆರ್.ಉಮಾಕಾಂತ್, ಕೆ.ಎಂ.ಪುಟ್ಟು, ಕೆ.ಎಂ.ನಾಗರಾಜು, ಚಂದ್ರಶೇಖರ್, ಚಿಕ್ಕಲಿಂಗಪ್ಪ, ನಾಗೇಶ್, ಶ್ರೀಕಂಠ ಸೇರಿದಂತೆ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net