ಪಿಇಎಸ್ ಇಂಜಿನಿಯರಿಂಗ್ ಕಾಲೇಜಿಗೆ ರ‌್ಯಾಂಕ್

Published on

ಮೈಸೂರು: ಎನ್‌ಐಆರ್‌ಎಫ್ ನೀಡುವ ತಾಂತ್ರಿಕ ಸಂಸ್ಥೆಗಳ ಪಟ್ಟಿಯಲ್ಲಿ ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜು 151-200 ಬ್ಯಾಂಡ್‌ನಲ್ಲಿ ರ‌್ಯಾಂಕ್ ಪಡೆದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಎನ್.ಮಹಾಲಿಂಗೇಗೌಡ ತಿಳಿಸಿದರು.
ಪಿಇಎಸ್ ಕಾಲೇಜು ಐದು ವರ್ಷಗಳಿಂದ ಎನ್‌ಐಆರ್‌ಎಫ್ ರ‌್ಯಾಂಕ್‌ನಲ್ಲಿ ಸ್ಥಿರತೆ ಕಾಪಾಡಿಕೊಂಡು ಬಂದಿದೆ. ರ‌್ಯಾಂಕ್‌ನಿಂದಾಗಿ ಸೌಲಭ್ಯ ಕೂಡ ಗುಣಮಟ್ಟದಿಂದ ಕೂಡಿದೆ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಮ್ಮ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ, ಅನುದಾನ ಪಡೆಯಲು ಅನುಕೂಲವಾಗಲಿದೆ. ಎನ್‌ಐಆರ್‌ಎಫ್ ನೀಡುವ ಪ್ರಕ್ರಿಯೆಯಲ್ಲಿ ಆಯಾ ಕಾಲೇಜಿನಲ್ಲಿರುವ ಸೌಲಭ್ಯಗಳಾದ ಬೋಧನೆ, ಕಲಿಕೆ ಮತ್ತು ಸಂಪನ್ಮೂಲಗಳು, ಸಂಶೋಧನೆ ಮತ್ತು ವೃತ್ತಿಪರ ಅಭ್ಯಾಸಗಳು, ಪದವಿ ಫಲಿತಾಂಶ ಮೊದಲಾದವನ್ನು ಪರಿಗಣಿಸಲಾಗುತ್ತದೆ ಎಂದು ಹೇಳಿದರು.
ದೇಶದ 4500 ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಸುಮಾರು 2500 ಇಂಜಿನಿಯರಿಂಗ್ ಸಂಸ್ಥೆಗಳು ಈ ಪದವಿಗಾಗಿ ಅರ್ಜಿ ಸಲ್ಲಿಸಿದ್ದವು ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net