ಪಿಎಚ್‌ಸಿಗಳಿಗೆ ಆಂಬುಲೆನ್ಸ್ ವಿತರಣೆ

15Manju5
ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಶುಕ್ರವಾರ ಸಂಸದೆ ಅಣ್ಣಾಸಾಹೇಬ ಜೊಲ್ಲೆ, ಮಂಗಲ ಅಂಗಡಿ ಅವರು ಆರೋಗ್ಯ ಇಲಾಖೆಗೆ ಆಂಬುಲೆನ್ಸ್ ಹಸ್ತಾಂತರಿಸಿದರು. ಡಿಸಿ ನಿತೇಶ ಪಾಟೀಲ, ಜಿಪಂ ಸಿಇಒ ದರ್ಶನ ಎಚ್.ವಿ. ಇತರರು ಇದ್ದರು.
Published on

ಬೆಳಗಾವಿ: ಗ್ರಾಮೀಣ ಪ್ರದೇಶದ ಜನರಿಗೆ ತುರ್ತು ಸಂದರ್ಭದಲ್ಲಿ ಆರೋಗ್ಯ ಚಿಕಿತ್ಸಾ ಸೌಲಭ್ಯ ಒದಗಿಸಲು ನಿಟ್ಟಿನಲ್ಲಿ ಸಮುದಾಯ ಆರೋಗ್ಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬುಲೆನ್ಸ್ ನೀಡಲಾಗುತ್ತಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ನಗರದ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರ ಪ್ರದೇಶಗಳಂತೆ ಗ್ರಾಮೀಣರಿಗೂ ಗುಣಮಟ್ಟದ ಚಿಕಿತ್ಸೆ, ಆರೋಗ್ಯ ಸೌಲಭ್ಯಗಳು ಸಕಾಲದಲ್ಲಿ ಸಿಗಬೇಕು. ಹಾಗಾಗಿಯೇ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸರ್ಕಾರಗಳು ಹೆಚ್ಚಿನ ಸೌಲಭ್ಯ ಕಲ್ಪಿಸುತ್ತಿವೆ ಎಂದರು. 2019-20 ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಒಟ್ಟಾರೆ 9 ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಂಬುಲೆನ್ಸ್‌ಗಳನ್ನು ನೀಡಲಾಗುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ವಾಹನ ಬಳಸಿಕೊಂಡು ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ತಿಳಿಸಿದರು. ಸಂಸದೆ ಮಂಗಲ ಅಂಗಡಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಪಂ ಸಿಇಒ ದರ್ಶನ ಎಚ್.ವಿ, ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net