ಪಿಎಫ್‍ಐ ನಿಷೇಧ ಐತಿಹಾಸಿಕ ನಿರ್ಣಯ

Chandrashekhar Patil
Published on

ಬೀದರ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ನಿಷೇಧವು ಭಯೋತ್ಪಾದನೆ ಮಟ್ಟ ಹಾಕುವ ದಿಸೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಣಯವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ ಪ್ರತಿಕ್ರಿಯಿಸಿದ್ದಾರೆ.
ಪಿಎಫ್‍ಐ ಸೇರಿದಂತೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಐದು ಸಂಘಟನೆಗಳನ್ನು ನಿಷೇಧಿಸಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಹೇಳಿದ್ದಾರೆ.
ಪಿಎಫ್‍ಐ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರೀಯವಾಗಿತ್ತು. ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿತ್ತು. ದೇಶದ ಅನೇಕ ರಾಜ್ಯಗಳಲ್ಲಿ ನಡೆದ ಗಲಭೆ, ಹಿಂದೂ ಕಾರ್ಯಕರ್ತರ ಹತ್ಯೆ, ದಕ್ಷಿಣ ಕನ್ನಡ ಜಿಲ್ಲೆಯ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಲ್ಲೂ ಅದರ ಕೈವಾಡ ಇತ್ತು ಎಂದು ಆರೋಪಿಸಿದ್ದಾರೆ.
ಸಂಘಟನೆಗಳ ನಿಷೇಧ ಬಹು ದಿನಗಳ ಬೇಡಿಕೆಯಾಗಿತ್ತು. ಕೇಂದ್ರ ಸರ್ಕಾರದ ಕ್ರಮ ವಿಛಿದ್ರಕಾರಿ ಶಕ್ತಿಗಳಿಗೆ ಸ್ಪಷ್ಟ ಸಂದೇಶ ನೀಡಿದೆ. ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಸಹಿಸಲಾಗದು ಎನ್ನುವ ಸಂದೇಶ ನೀಡಿದೆ. ದೇಶ ಪ್ರೇಮಿಗಳಲ್ಲಿ ಸಂತಸ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net