

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ
ಬೆಳಗಾವಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಅಧಿಸೂಚನೆಯನ್ನು ಹೊರಡಿಸಿದ್ದು, ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಒಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನೀಷೇಧಿಸಲಾಗಿದ್ದು, ಆದರೂ ಪಿಒಪಿ ಮೂರ್ತಿ ತಯಾರಿಸಿದರೇ ಅಂತಹ ಮೂರ್ತಿಕಾರರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀ ಹೇಳಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ, 1974ರ ಪ್ರಕಾರ ಕಲಂ 33 (ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್, 1860ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಡಿಸಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ-ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ಬಳಿಕ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ,ಪುರಸಭೆ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬಹುದು. ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ/ ಪುರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು ಎಂದು ಡಿಸಿ ತಾಕೀತು ಮಾಡಿದ್ದಾರೆ. ಸಾಂದರ್ಭಿಕವಾಗಿ ಗಣೇಶ ಹಬ್ಬದ ಸಂದರ್ಭದಲ್ಲಿ ಏಳು ದಿನಗಳಿಗೆ ಮೀರದಂತೆ ನಿರಂತರ ಬಳಕೆಗೆ ಧ್ವನಿವರ್ಧಕ, ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟು ಮಾಡುವ ಉಪಕರಣಗಳನ್ನು ಬಳಸಲು ಪೋಲೀಸ್ ಇಲಾಖೆಯಿಂದ ಅನುಮತಿಯನ್ನು ಕರ್ನಾಟಕ ಪೋಲೀಸ್ ಕಾಯ್ದೆ, 1963 ರನ್ವಯ ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವ ಸಂಬಂಧಿಸಿದ ಮಾರ್ಗಸೂಚಿಗಳನ್ವಯ ಪಡೆಯುಬೇಕು. ಅನುಮತಿ/ಪರವಾನಗಿಯು ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ) ನಿಯಮಗಳು, 2000, ಮತ್ತು ಆಗಸ್ಟ್.13 2002ರ ಸರ್ಕಾರಿ ಆದೇಶದ ನಿಬಂಧನೆಗಳನ್ನು ಸಹ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ, 1974ರ ಪ್ರಕಾರ ಕಲಂ 33 (ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್, 1860ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಡಿಸಿ ಎಚ್ಚರಿಕೆ ನೀಡಿದ್ದಾರೆ